6

ಅರಣ್ಯವಾಸಿಗಳ ಪರವಾಗಿ 144 ಸಂಘಟನೆ!

ಅರಣ್ಯ ಹಕ್ಕು ಕಾಯ್ದೆ ವಿಷಯವಾಗಿ ಸುಪ್ರೀಂ ಕೋರ್ಟನಲ್ಲಿ ಏಪ್ರಿಲ್ 2ರಂದು ವಿಚಾರಣೆ ನಡೆಯಲಿದೆ. `ಕೇಂದ್ರ ಸರ್ಕಾರವೂ ಅರಣ್ಯ ಹಕ್ಕು ಕಾಯಿದೆಯನ್ನು ಸಮರ್ಥವಾಗಿ ಸಮರ್ಥಿಸಿಕೊಳ್ಳಬೇಕು’ ಎಂದು ಆಗ್ರಹಿಸಿ 144 ಸಂಘಟನೆಗಳು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿವೆ.

ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರಗಳ ಸಚಿವ ಜೂವಾಲ್ ಓರಾಮ ಅವರಿಗೆ ಮಾರ್ಚ 31ರಂದು ಇಮೇಲ್ ಮೂಲಕ ವಿವಿಧ ಸಂಘಟನೆಯವರು ತಮ್ಮ ಅಭಿಪ್ರಾಯ ರವಾನಿಸಿದ್ದಾರೆ. `ಬುಡಕಟ್ಟು ಮತ್ತು ಇತರೆ ಪಾರಂಪರಿಕ ಅರಣ್ಯವಾಸಿ ಕುಟುಂಬಗಳಿಗೆ ಅರಣ್ಯ ಭೂಮಿ ಹಕ್ಕಿಗೆ ಸಂಬAಧಿಸಿ ಕೇಂದ್ರ ಸರ್ಕಾರ ಅರಣ್ಯವಾಸಿಗಳ ಪರ ನಿಲುವು ಬೆಂಬಲಿಸಬೇಕು’ ಎಂದು ಪತ್ರದಲ್ಲಿ ವಿವರಿಸಲಾಗಿದೆ.

`ಸುಪ್ರೀಂ ಕೋರ್ಟ ಹಿಂದಿನ ಆದೇಶದಲ್ಲಿ ನಿಗದಿಗೊಳಿಸಿದ ನಿಯಮಾವಳಿಗಳನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ಪಾಲನೆ ಮಾಡಿಲ್ಲ. ಸುಪ್ರೀಂ ಕೋರ್ಟ ಅರಣ್ಯ ಭೂಮಿ ಮಂಜೂರಿಗೆ ನಿಗದಿಗೊಳಿಸಿದ ನಿಯಮಾವಳಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ’ ಎಂದು ಸಹ ಈ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಉಪ-ಜಿಲ್ಲಾಸಮಿತಿ ಹಸ್ತಕ್ಷೇಪ:
`ಅರಣ್ಯ ಹಕ್ಕು ಮಂಜೂರಿ ಪ್ರಕ್ರಿಯೆಯಲ್ಲಿ ಗ್ರಾಮ ಸಭೆಯ ನಿರ್ಣಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿಲ್ಲ. ಉಪವಿಭಾಗ ಮತ್ತು ಜಿಲ್ಲಾಮಟ್ಟದ ಅರಣ್ಯ ಹಕ್ಕು ಸಮಿತಿಯಲ್ಲಿ ಅಧಿಕಾರದ ದುರುಪಯೋಗ ಮತ್ತು ಅನಿಯಂತ್ರಿತ ಹಸ್ತಕ್ಷೇಪ ಉಂಟುಮಾಡಿದೆ. ಇಂದರಿoದ ಹೆಚ್ಚಿನ ಅರಣ್ಯವಾಸಿಗಳು ಭೂಮಿ ಹಕ್ಕಿನಿಂದ ವಂಚಿತರಾಗಿದ್ದಾರೆ’ ಎಂದು ಪತ್ರದಲ್ಲಿ ಉಲ್ಲೇಖಿಸದ ಬಗ್ಗೆ ನ್ಯಾಯವಾದಿ ರವೀಂದ್ರ ನಾಯ್ಕ ತಿಳಿಸಿದ್ದಾರೆ.

  • Related Posts

    ನವದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ

    Share this… Facebook Pinterest Twitter Linkedin Whatsappನವದೆಹಲಿಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇಂದು ನವದೆಹಲಿಯಲ್ಲಿ ನಡೆದ…

    ಬಿಜೆಪಿ ಗೆಲುವು: ಬಿ.ಸಿ. ಪಾಟೀಲ ಹೇಳಿದ್ದೇನು?

    Share this… Facebook Pinterest Twitter Linkedin Whatsappರಾಜಸ್ಥಾನದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿ.ಸಿ.…

    You cannot copy content of this page