6
  • Latest
Chinnar Kalarava Summer camp from the government at the gram panchayat level!

ಚಿಣ್ಣರ ಕಲರವ: ಗ್ರಾಮ ಪಂಚಾಯತ ಮಟ್ಟದಲ್ಲಿ ಸರ್ಕಾರದಿಂದಲೇ ಬೇಸಿಗೆ ಶಿಬಿರ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಚಿಣ್ಣರ ಕಲರವ: ಗ್ರಾಮ ಪಂಚಾಯತ ಮಟ್ಟದಲ್ಲಿ ಸರ್ಕಾರದಿಂದಲೇ ಬೇಸಿಗೆ ಶಿಬಿರ!

AchyutKumar by AchyutKumar
in ಸ್ಥಳೀಯ
Chinnar Kalarava Summer camp from the government at the gram panchayat level!

ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ ಮಟ್ಟದಲ್ಲಿ ಮಕ್ಕಳಿಗಾಗಿ ಸರ್ಕಾರವೇ ಬೇಸಿಗೆ ಶಿಬಿರ ಆಯೋಜಿಸಲು ಮುಂದಾಗಿದೆ. ಈಗಾಗಲೇ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಗಳಲ್ಲಿ ಶಿಬಿರ ಶುರುವಾಗಿದೆ. ಇನ್ನಷ್ಟು ಕಡೆ ಶಿಬಿರ ಆಯೋಜನೆಗೆ ಸಿದ್ಧತೆ ನಡೆದಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಈ ಶಿಬಿರ ಆಯೋಜಿಸಲಾಗುತ್ತಿದೆ. ಪ್ರತಿ ದಿನ 3 ತಾಸುಗಳ ಕಾಲ 15 ದಿನದವರೆಗೆ ಶಿಬಿರ ನಡೆಸಲು ನಿರ್ಧರಿಸಲಾಗಿದೆ.

ADVERTISEMENT

ಈ ಶಿಬಿರದಲ್ಲಿ ಗ್ರಾಮಾಂತರ ಪ್ರದೇಶದಲ್ಲಿರುವ ಮಕ್ಕಳ ಓದುವ, ಬರೆಯುವ, ಕಲಾತ್ಮಕ ಚಟುವಟಿಕೆಗಳಿಗೆ ಮತ್ತು ಆಟಗಳಿಗೆ ಒತ್ತು ನೀಡಲಾಗುತ್ತಿದೆ. ಮಕ್ಕಳು ತಮ್ಮ ಬೇಸಿಗೆ ರಜೆಯನ್ನು ಮನರಂಜನೀಯವಾಗಿ ಹಾಗೂ ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಈ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರದಲ್ಲಿ ಓದುವ, ಬರೆಯುವ, ಅಂಕಿ ಸಂಖ್ಯೆ ವಿಜ್ಞಾನ ವಿಷಯಗಳು, ನಾಯಕತ್ವ ಮತ್ತು ಸಂವಹನ ಕೌಶಲ್ಯದ ಬಗ್ಗೆ ಕಲಿಸಲಾಗುತ್ತದೆ. ಪರಿಸರ ಕಾಳಜಿ, ಸಾಮಾಜಿಕ ಕಾಳಜಿ ಬೆಳೆಸುವುದು ಮತ್ತು ಸ್ಥಳೀಯ ಸಂಸ್ಕೃತಿ, ಜೀವನ ಶೈಲಿ, ಇತಿಹಾಸ ಅಂಶಗಳ ಬಗ್ಗೆಯೂ ಬೆಳಕು ಚಲ್ಲಲಾಗುತ್ತದೆ. ಮಕ್ಕಳಲ್ಲಿರುವ ಸೃಜನಾತ್ಮಕ ಸಾಮರ್ಥ್ಯವನ್ನು ಅಭಿವೃದ್ಧಿಪಡಿಸುವುದು ಸಹ ಈ ಬೇಸಿಗೆ ಶಿಬಿರದ ಆಶಯವಾಗಿರುತ್ತದೆ. ಈ ಬೇಸಿಗೆ ಶಿಬಿರವೂ ಮಕ್ಕಳಲ್ಲಿನ ಸೃಜನಾತ್ಮಕತೆಗೆ ಸಹಾಯಕವಾಗಿ ಮಕ್ಕಳ ಪುಸ್ತಕ, ದಿನಪತ್ರಿಕೆ, ನಿಯತಕಾಲಿಕೆಗಳನ್ನು ಓದುವುದು ಚಿತ್ರ ಓದುವಿಕೆ, ಕಥೆ ಕಟ್ಟುವಿಕೆ, ಗಟ್ಟಿ ಮಾಡುವುದು, ಭಾಷÀಣ ಮಾಡುವುದು ಸೇರಿದಂತೆ ಬರೆಯುವ ಹಾಗೂ ಅಭಿವ್ಯಕ್ತಿ ಸಾಮರ್ಥ್ಯ ಹೆಚ್ಚಿಸುವ ಚಟುವಟಿಕೆಗಳನ್ನು ಒಳಗೊಂಡಿದೆ.

ಅoಕಿ ಸಂಖ್ಯೆ ಮತ್ತು ವಿಜ್ಞಾನಕ್ಕೆ ಸಂಬoಧಿಸಿದoತೆ ಕೌಶಲ್ಯವನ್ನು ಅಭಿವೃದ್ಧಿಪಡಿಸಲು ಕಾಮನಬಿಲ್ಲು ಮೂಡಿಸುವಿಕೆ, ವಿವಿಧ ಗಣಿತದ ಘನಾಕೃತಿಗಳ ಪರಿಚಯ, ಚಿನ್ನಿದಾಂಡು, ಗ್ರಾಮದಲ್ಲಿ ಬಳಸುವ ಅಳತೆ ಮತ್ತು ಮಾಪಕಗಳು, ಟ್ಯಾನ್‌ಗ್ರಾಮ್. ಪೇಪರ್ ಫ್ಯಾನ್, ಜೆಟ್ ಪ್ಲೇನ್, ಕಣ್ಣು ಮಿಟುಕಿಸುವ ಗೊಂಬೆ, ಚದುರಂಗ, ಕೇರಂ, ಆಕಾಶ ವೀಕ್ಷಣೆ ಮತ್ತಿತರೆ ಚಟುವಟಿಕೆಗಳನ್ನು ಆಯೋಜಿಸಲಾಗುತ್ತದೆ. ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿ ನಾಯಕತ್ವ, ನೈತಿಕತೆ, ಸಹಾನುಭೂತಿ, ಜವಾಬ್ದಾರಿ ನಿರ್ವಹಣೆ, ತಂಡ ನಿರ್ವಹಣೆ, ಸಾಮಾಜಿಕ ಹೊಂದಾಣಿಕೆ ಮತ್ತು ನಾಗರಿಕ ಪ್ರಜ್ಞೆ ವಿಷಯವಾಗಿ ವಿವಿಧ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ಮಕ್ಕಳ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸಲು, ದೈನಂದಿನ ಬದುಕಿನಲ್ಲಿ ಕಾಣುವ ಚಟುವಟಿಕೆಗಳನ್ನು ಅರಿಯಲು, ಶೋಧನಾ ಪ್ರವೃತ್ತಿ ಪ್ರೋತ್ಸಾಹಿಸಲು ಮತ್ತು ಕಲಿತದ್ದನ್ನು ವರದಿ ಮಾಡಲು ಯೋಜನಾ ಚಟುವಟಿಕೆಗಳನ್ನು ರೂಪಿಸಲಾಗಿದೆ.

Advertisement. Scroll to continue reading.

ಯೋಜನಾ ಚಟುವಟಿಕೆಗಳಲ್ಲಿ ಪ್ರಮುಖವಾಗಿ ನಮ್ಮೂರಿನ ಪಕ್ಷಿಗಳು, ನೀರಿನ ಪಯಣ, ನನ್ನ ಊರು, ನಮ್ಮೂರಿನ ಇತಿಹಾಸ, ಜಾತ್ರೆ. ಜನಪದ ಗೀತೆಗಳು/ಜನಪದ ಕಥೆ, ಕ್ರೀಡೆಗಳು, ಕಲೆಗಳು, ಸ್ಥಳೀಯ ಸಂಸ್ಥೆಗಳಿಗೆ (ಅoಚೆ ಕಚೇರಿ, ಹಾಲು ಉತ್ಪಾದಕರ ಸಹಕಾರ ಸಂಘ, ಬ್ಯಾಂಕ್, ಪಶುವೈದ್ಯಕೀಯ ಆಸ್ಪತ್ರೆ, ಅಂಗನವಾಡಿ ಕೇಂದ್ರ ಗ್ರಾಮ ಪಂಚಾಯತಿ, ಆಸ್ಪತ್ರೆ ಇತ್ಯಾದಿ) ಭೇಟಿ ಮಾಡಲು ಅವಕಾಶವಿದೆ. 8ರಿಂದ 13 ವರ್ಷದೊಳಗಿನ 40 ಮಕ್ಕಳು ಈ ಶಿಬಿರದಲ್ಲಿ ಭಾಗವಹಿಸುವ ಅವಕಾಶವಿದೆ. ಈ ಶಿಬಿರಕ್ಕೆ ನಿಮ್ಮ ಮಕ್ಕಳನ್ನು ಸೇರಿಸಲು ಕೂಡಲೇ ಗ್ರಾಮ ಪಂಚಾಯತಗೆ ಭೇಟಿ ಕೊಡಿ.. ಇನ್ನಷ್ಟು ಮಾಹಿತಿ ಪಡೆಯಿರಿ!

Advertisement. Scroll to continue reading.
Previous Post

ಅರಣ್ಯ ಹಕ್ಕು: ಸಂವಾದ ಸಭೆ ನಡೆಸಲು ಮುಖ್ಯಮಂತ್ರಿ ಬಳಿ ಹಕ್ಕೊತ್ತಾಯ!

Next Post

ಅರಬ್ಬಿ ಅಲೆ: ಸಮುದ್ರಕ್ಕೆ ಬಿದ್ದ ಮೀನುಗಾರ ಸಾವು!

Next Post
ಕಾಲಿಗೆ ಸುತ್ತಿದ ಬಲೆ: ಪಾತಿದೋಣಿಯಲ್ಲಿದ್ದ ಮೀನುಗಾರ ಸಾವು!

ಅರಬ್ಬಿ ಅಲೆ: ಸಮುದ್ರಕ್ಕೆ ಬಿದ್ದ ಮೀನುಗಾರ ಸಾವು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ