6
  • Latest
Janiwara case Srimattha backs the victimized students!

ಜನಿವಾರ ಪ್ರಕರಣ: ಸಂತ್ರಸ್ತ ವಿದ್ಯಾರ್ಥಿಗಳಿಗೆ ಶ್ರೀಮಠದ ಅಭಯ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಜನಿವಾರ ಪ್ರಕರಣ: ಸಂತ್ರಸ್ತ ವಿದ್ಯಾರ್ಥಿಗಳಿಗೆ ಶ್ರೀಮಠದ ಅಭಯ!

AchyutKumar by AchyutKumar
in ರಾಜ್ಯ, ಸ್ಥಳೀಯ
Janiwara case Srimattha backs the victimized students!

`ಬೀದರ್ ಹಾಗೂ ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗೆ ಜನಿವಾರ ತೆಗೆಯುವಂತೆ ತಾಕೀತು ಮಾಡಿದ ಪರೀಕ್ಷಾ ಅಧಿಕಾರಿಗಳ ವಿರುದ್ಧ ಕ್ರಮವಾಗಬೇಕು’ ಎಂದು ರಾಮಚಂದ್ರಾಪುರಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದ್ದಾರೆ. `ಜನಿವಾರದ ಕಾರಣಕ್ಕೆ ಪರೀಕ್ಷೆ ಬರೆಯಲು ಸಾಧ್ಯವಾಗದ ಎಲ್ಲರಿಗೂ ಸಹಾಯಹಸ್ತ ಚಾಚಲು ಶ್ರೀಮಠ ಸಿದ್ಧ’ ಎಂದು ಶ್ರೀಗಳು ಘೋಷಿಸಿದ್ದಾರೆ.

ADVERTISEMENT

`ಜನಿವಾರದ ಕಾರಣಕ್ಕಾಗಿ ವಿದ್ಯಾರ್ಥಿಗೆ ಸಿಇಟಿ ಪರೀಕ್ಷೆ ಬರೆಯಲು ಅವಕಾಶ ನೀಡದಿರುವುದು ವಿಷಾಧನೀಯ. ಶಿವಮೊಗ್ಗದಲ್ಲಿ ವಿದ್ಯಾರ್ಥಿಯ ಜನಿವಾರ ತುಂಡರಿಸಿರುವುದು ಸಹ ಸಹಿಸಲು ಸಾಧ್ಯವಿಲ್ಲ’ ಎಂದವರು ಪ್ರತಿಕ್ರಿಯಿಸಿದ್ದಾರೆ. `ಪ್ರತಿಭಟನೆಯ ಮೂಲಕ ಇದನ್ನು ಸಮುದಾಯದವರು ಖಂಡಿಸಬೇಕು’ ಎಂದು ರಾಮಚಂದ್ರಾಪುರಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಕರೆ ನೀಡಿದ್ದಾರೆ. `ಅಧಿಕಾರಿಗಳ ಈ ವರ್ತನೆಯ ಹಿಂದೆ ಜಾತಿದ್ವೇಷ ಹಾಗೂ ಜನಿವಾರ ಧರಿಸುವ ಜಾತಿಯವರನ್ನು ಸಂಪೂರ್ಣವಾಗಿ ತುಳಿಯುವ ಭಾವ ಕಾಣಿಸುತ್ತದೆ. ವಿದ್ಯಾರ್ಥಿಗಳು ಪರೀಕ್ಷೆಯ ಮಾನಸಿಕ ಒತ್ತಡದಲ್ಲಿರುವಾಗ ಅಧಿಕಾರಿಗಳು ಈ ರೀತಿ ಕ್ರೌರ್ಯ ಮೆರೆದಿರುವುದು ಖಂಡನೀಯ’ ಎಂದು ಹೇಳಿದ್ದಾರೆ.

`ಜನಿವಾರ ಕೀಳುವಾಗ ಮನಸ್ಸಿಗೆ ಎಂಥ ನೋವಾಗುತ್ತದೆ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು. ಬ್ರಾಹ್ಮಣರು ಇಂಥ ನೋವನ್ನು ಸಹಿಸಬಾರದು. ಈ ಪ್ರಕರಣವನ್ನು ಹಾಗೇ ಬಿಟ್ಟರೆ ದೇಶದಲ್ಲಿ ಬದುಕಲೂ ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಬಹುದು’ ಎಂದು ರಾಘವೇಶ್ವರ ಶ್ರೀ ಆತಂಕವ್ಯಕ್ತಪಡಿಸಿದ್ದಾರೆ. `ಈ ಕೃತ್ಯವನ್ನು ಬ್ರಾಹ್ಮಣರು ಸಂಘಟಿತರಾಗಿ ಪ್ರತಿಭಟಸುವುದು ಅಗತ್ಯ ಮಾತ್ರವಲ್ಲ. ಅನಿವಾರ್ಯವೂ ಹೌದು. ಇದು ಬ್ರಾಹ್ಮಣರಿಗಷ್ಟೇ ಸೀಮಿತವಲ್ಲ. ಬೇರೆಯವರೂ ಜನಿವಾರವನ್ನು ಗೌರವದಿಂದ ಧಾರಣೆ ಮಾಡುತ್ತಾರೆ. ಲಿಂಗಾಯಿತರು ಕೂಡಾ ಲಿಂಗವನ್ನು ಧರಿಸುತ್ತಾರೆ. ಅದನ್ನೂ ಇಂಥದ್ದೇ ಸೂತ್ರದಿಂದ ಧರಿಸಲಾಗುತ್ತಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಇಡೀ ಸಮಾಜಕ್ಕೆ ಅಪಾಯ ಕಾದಿದೆ’ ಎಂದು ಎಚ್ಚರಿಸಿದ್ದಾರೆ.

Advertisement. Scroll to continue reading.

`ಧಾರ್ಮಿಕ ಚಿಹ್ನೆಯನ್ನು ತೆಗೆದುಹಾಕಿದರೆ ಪರೀಕ್ಷೆ ಬರೆಯುವುದಿಲ್ಲ ಎಂದು ದೃಢ ನಿರ್ಧಾರ ಕೈಗೊಂಡ ವಿದ್ಯಾರ್ಥಿಗೆ ಅಭಿನಂದನೆ. ಧಾರ್ಮಿಕತೆಯಲ್ಲಿ ರಾಜಿ ಮಾಡಿಕೊಳ್ಳದ ವಿದ್ಯಾರ್ಥಿಯನ್ನು ಪ್ರತಿಯೊಬ್ಬರು ಮೆಚ್ಚಬೇಕು. ಇಡೀ ಬ್ರಾಹ್ಮಣ ಸಮಾಜ ಮಾತ್ರವಲ್ಲ. ಭಾರತೀಯರೆಲ್ಲರೂ ಒಗ್ಗೂಡಿ ತಕ್ಕ ಪ್ರತಿಕ್ರಿಯೆ ನೀಡಬೇಕು ಎಂದು ಅವರು ಆಶಿಸಿದ್ದಾರೆ.

Advertisement. Scroll to continue reading.

ಹವ್ಯಕ ಮಹಾಮಂಡಲವೂ ಜನಿವಾರ ತೆಗೆಯುವ ಪ್ರಯತ್ನದ ಘಟನೆಯನ್ನು ಖಂಡಿಸಿದ್ದು, ಸಮಗ್ರ ಹವ್ಯಕ ಮಹಾಮಂಡಲ ಸಭೆಯಲ್ಲಿ ಈ ಬಗ್ಗೆ ಖಂಡನಾ ನಿರ್ಣಯ ಆಂಗೀಕರಿಸಿದೆ. `ಅಕ್ಷಮ್ಯ ಅಪರಾಧ ಎಸಗಿದ ಅಧಿಕಾರಿಗಳಿಗೆ ಶಿಕ್ಷೆ ವಿಧಿಸಿ ಸಾಮಾಜಿಕ ಸ್ವಾಸ್ಥ್ಯ ಕಾಪಾಡಬೇಕು. ಜನಿವಾರ ಕಾರಣಕ್ಕೆ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಿ, ವಿದ್ಯಾರ್ಥಿಯ ಭವಿಷ್ಯ ಹಾಗೂ ಆತ್ಮಗೌರವ ರಕ್ಷಿಸಬೇಕು’ ಎಂದು ಹವ್ಯಕ ಮಹಾಮಂಡಲದ ಅಧ್ಯಕ್ಷ ಮೋಹನ ಭಾಸ್ಕರ ಹೆಗಡೆ ಆಗ್ರಹಿಸಿದ್ದಾರೆ.

Previous Post

ಮದುವೆಗೆ ಹೋಗಬೇಕಿದ್ದ ಮಹಿಳೆ ಕಾಣೆ: ಮಕ್ಕಳ ಬಗ್ಗೆಯೂ ಸಿಕ್ಕಿಲ್ಲ ಸುಳಿವು!

Next Post

ಜೋಗದ ಅಡಿ ಸೆಲ್ಪಿ ಹುಚ್ಚು: ಅಪಾಯಕ್ಕೆ ಸಿಲುಕಿದವರಿಗೆ ಅಪರ ಜಿಲ್ಲಾಧಿಕಾರಿಗಳ ಪಾಠ!

Next Post
Selfie craze during jogging Additional District Magistrate warns those in danger!

ಜೋಗದ ಅಡಿ ಸೆಲ್ಪಿ ಹುಚ್ಚು: ಅಪಾಯಕ್ಕೆ ಸಿಲುಕಿದವರಿಗೆ ಅಪರ ಜಿಲ್ಲಾಧಿಕಾರಿಗಳ ಪಾಠ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ