6

ಮಾನವನನ್ನು ಕೊಂದ ಮಂಗನ ಕಾಯಿಲೆ

ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ಹೊನ್ನಾವರದ ವ್ಯಕ್ತಿಯೊಬ್ಬರು ಸಾವನಪ್ಪಿದ್ದಾರೆ. ಅವರನ್ನು ಬದುಕಿಸಿಕೊಳ್ಳಲು ಸಾಕಷ್ಟು ಪ್ರಯತ್ನ ನಡೆಸಿದರೂ ಪ್ರಯೋಜನವಾಗಲಿಲ್ಲ.

63 ವರ್ಷದ ತಿಮ್ಮಣ್ಣ ಹೆಗಡೆ ಅವರು ವಿವಿಧ ರೋಗಗಳಿಂದ ಬಳಲುತ್ತಿದ್ದರು. ಮಂಗನ ಕಾಯಿಲೆಯ ಲಕ್ಷಣಗಳಿದ್ದರೂ ಮೊದಲು ಅದು ಖಚಿತವಾಗಿರಲಿಲ್ಲ. ವಿವಿಧ ತಪಾಸಣೆಗಳ ನಂತರ ಏಪ್ರಿಲ್ 5ರಂದು ತಿಮ್ಮಣ್ಣ ಹೆಗಡೆ ಅವರಿಗೆ ಮಂಗನ ಕಾಯಿಲೆ ದೃಢವಾಗಿತ್ತು.

ತಿಮ್ಮಣ್ಣ ಹೆಗಡೆ ಅವರನ್ನು ಉಳಿಸಿಕೊಳ್ಳಲು ಕುಟುಂಬದವರು ಸಾಕಷ್ಟು ಪ್ರಯತ್ನ ನಡೆಸಿದರು. ವೈದ್ಯರು ಸಹ ನಿರಂತರ ಆರೈಕೆಯಲ್ಲಿ ತೊಡಗಿದ್ದರು. ಮಣಿಪಾಲದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ತಿಮ್ಮಣ್ಣ ಹೆಗಡೆ ಅವರಿಗೆ ಚಿಕಿತ್ಸೆ ಕೊಡಿಸಲಾಯಿತು. ಆದರೆ, ಅವರ ಆರೋಗ್ಯದಲ್ಲಿನ ಏರುಪೇರು ಮೊದಲಿನಂತೆಯೇ ಮುಂದುವರೆಯಿತು.

ಕೊನೆಗೂ ಚಿಕಿತ್ಸೆಗೆ ಸ್ಪಂದಿಸದೇ ತಿಮ್ಮಣ್ಣ ಹೆಗಡೆ ಕೊನೆಉಸಿರೆಳೆದರು. `ಈ ವರ್ಷ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು ನಾಲ್ವರಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದೆ. ಅದರಲ್ಲಿ ಒಬ್ಬರು ಸಾವನಪ್ಪಿದ್ದಾರೆ. ಉಳಿದವರ ಆರೋಗ್ಯ ಸ್ಥಿರವಾಗಿದೆ’ ಎಂದು ಆರೋಗ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

  • Related Posts

    ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್ ಐಆರ್ ವಿಚಾರದಲ್ಲಿ ಚುನಾವಣಾ ಆಯೋಗ ದೂರು ನೀಡದೇ ಯಾವುದೆ ಎಫ್ ಐಆರ್ ಮಾಡಲು ಅವಕಾಶ ಇಲ್ಲ:ಬಸವರಾಜ ಬೊಮ್ಮಾಯಿ ಸಿಎಂ ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ:ಬಸವರಾಜ ಬೊಮ್ಮಾಯಿ…

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    You cannot copy content of this page