6

ತಾಯಿ ಹೆಸರಿನಲ್ಲಿ ವೃಕ್ಷಮಾತೆಯ ಫೋಷಣೆ: ಶಿರಸಿಯಲ್ಲಿ ಮತ್ತೆ ಮೂರು ದೇವತೆಯ ಸ್ಥಾಪನೆ!

ಶಿರಸಿ ಅರಣ್ಯ ಕಾಲೇಜಿನ ಆವರಣದಲ್ಲಿ ಉಪರಾಷ್ಟçಪತಿ ಜಗದೀಪ್ ಧನಕರ್ ಅವರು ತಮ್ಮ ತಾಯಿ ಕೇಸರಿ ದೇವಿ ಅವರ ಹೆಸರಿನಲ್ಲಿ ಗಿಡ ನೆಟ್ಟಿದ್ದಾರೆ. ಈ ವೇಳೆ ಅವರ ಪತ್ನಿ ಸುದೇಶ ಧನಕರ್ ಅವರು ತಮ್ಮ ತಾಯಿ ಭಗವತಿ ದೇವಿ ಹೆಸರಿನಲ್ಲಿ ಗಿಡ ನಾಟಿ ಮಾಡಿದರು. ರಾಜ್ಯಪಾಲ ಥಾವರಚಂದ್ ಗೆಹಲೋತ್ ಸಹ ತಮ್ಮ ತಮ್ಮ ತಾಯಿ ಸುಮನ್ ಬಾಯಿ ಹೆಸರಿನಲ್ಲಿ ಅಶೋಕ ವೃಕ್ಷ ನೆಟ್ಟರು.

ಈ ಎಲ್ಲಾ ಗಣ್ಯರು ಸೋಮವಾರ ಶಿರಸಿಯ ಅರಣ್ಯ ಕಾಲೇಜು ಆವರಣದಲ್ಲಿ `ದೇಶ ಕಟ್ಟುವಿಕೆಯಲ್ಲಿ ಅರಣ್ಯ ವಿಜ್ಞಾನದ ಪಾತ್ರ’ ವಿಷÀಯದ ಕುರಿತಾಗಿ ಅರಣ್ಯ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು. `ಮಾನವ ಮತ್ತು ಜೀವ ಸಂಕುಲದ ಏಕೈಕ ಆವಾಸ ಸ್ಥಾನವಾಗಿರುವ ಭೂಮಿ ಮತ್ತು ಇಲ್ಲಿನ ಪ್ರಕೃತಿ ಸಂಪತ್ತನ್ನು ಸಂರಕ್ಷಿಸಿ ಬೆಳೆಸುವಲ್ಲಿ ವಿದ್ಯಾರ್ಥಿಗಳು ಯೋಧರಾಗಬೇಕು’ ಎಂದು ಉಪರಾಷ್ಟçಪತಿ ಜಗದೀಪ್ ಧನಕರ್ ಕರೆ ನೀಡಿದರು.

`ಪ್ರಕೃತಿಯು ನಮಗೆ ಎಲ್ಲವನ್ನು ನೀಡಿದೆ. ಅದನ್ನು ದುರ್ಬಳಕೆ ಮಾಡಿಕೊಳ್ಳದೆ ನಮ್ಮ ಅವಶ್ಯಕತೆಗೆ ತಕ್ಕಂತೆ ಮಿತವಾಗಿ ಬಳಸಬೇಕು. ಪರಿಸರವನ್ನು ಮುಂದಿನ ಪೀಳಿಗೆಗೆ ಉಳಿಸಬೇಕು. ಈ ಪ್ರಕೃತಿಯು ಮಾನವನಿಗೆ ಮಾತ್ರವಲ್ಲದೇ ಪ್ರಾಣಿ ಪಕ್ಷಿಗಳು ಮರ ಗಿಡಗಳು ಸೇರಿದಂತೆ ಎಲ್ಲಾ ಜೀವ ಸಂಕುಲಕ್ಕೆ ಸೇರಿದ್ದಾಗಿದೆ’ ಎಂದವರು ಹೇಳಿದರು. `ನಮ್ಮ ದೇಶದಲ್ಲಿ ವೈದಿಕ ಯುಗದಿಂದಲೂ ಪರಿಸರ ಮತ್ತು ಅರ್ಥ ವ್ಯವಸ್ಥೆ ಪರಸ್ಪರ ಒಟ್ಟಾಗಿ ಸಾಗಿದೆ. ಭಾರತವು ಸಾಂಸ್ಕೃತಿಕವಾಗಿ ಸಿರಿವಂತವಾಗಿದೆ. ಪ್ರಾಚೀನ ಕಾಲದಿಂದಲೂ ಈ ನೆಲದಲ್ಲಿ ಪರಿಸರ ಸಂರಕ್ಷಣೆಯ ಮಹತ್ವ ಸಾರಲಾಗಿತ್ತು. ಪರಿಸರದೊಂದಿಗೆ ಬದುಕುವ ಕಲೆಯನ್ನು ಪೂರ್ವಜರು ಕರಗತ ಮಾಡಿಕೊಂಡಿದ್ದರು’ ಎಂದರು.

`ಪರಿಸರ ನಾಶ ಮಾಡಿ ಅಭಿವೃದ್ಧಿ ಚಟುವಟಿಕೆ ನಡೆಸುವ ಬದಲು ಪ್ರಾಕೃತಿಕ ಸೌಹಾರ್ದ ಕಾಪಾಡುವ ತುರ್ತು ಅಗತ್ಯವಿದೆ. ಪಶ್ಚಿಮ ಘಟ್ಟ ಪ್ರದೇಶವು ಜಗತ್ತಿನಲ್ಲೇ ಶ್ರೀಮಂತ ಜೀವ ವೈವಿಧ್ಯ ಹೊಂದಿರುವ ತಾಣ. ಇಂತಹ ವಾತಾವರಣದಲ್ಲಿ ವಿದ್ಯಾರ್ಥಿಗಳು ಗೋಡೆಯ ನಡುವೆ ಕಲಿಯುವುದಕ್ಕಿಂತ ವಿಸ್ತಾರ ಪ್ರದೇಶದಲ್ಲಿ ಕಲಿಯಬಹುದು’ ಎಂದರು. `ಅರಣ್ಯವು ಶ್ವಾಸಕೋಶದಂತೆ, ಶ್ವಾಸಕೋಶ ಸರಿಯಾಗಿದ್ದರೆ ಉಸಿರಾಡಬಹುದು. ಜಾಗತಿಕ ತಾಪಮಾನ ಏರಿಕೆಯು ಜಗತ್ತಿಗೆ ಎಚ್ಚರಿಕೆ ನೀಡುತ್ತಿದೆ. ಈ ಸವಾಲು ಎದುರಿಸಲು ಪರಿಸರ ಉಳಿಸಬೇಕು. ಮನುಷ್ಯನ ಅತಿಯಾಸೆಗೆ ಪರಿಸರ ನಾಶವಾಗುತ್ತಿದ್ದರೆ ಭೂಮಿ ತಾಯಿ ಕ್ಷಮೆ ನೀಡಲಾರಳು’ ಎಂದು ಎಚ್ಚರಿಸಿದರು.

`ಸಸಿ ನಾಟಿ ಮಾಡುವುದೇ ಅರಣ್ಯ ರಕ್ಷಣೆಯಲ್ಲ. ಸಸ್ಯ ಸಂಪತ್ತು, ಜೀವಿಗಳ ಉಳಿವು, ಗಾಳಿ, ನೀರಿನ ಸಂರಕ್ಷಣೆ ಅಗತ್ಯವಿದೆ. ಗಾಳಿ, ನೀರು ಮನುಷÀ್ಯನ ಆರೋಗ್ಯಯುತ ಜೀವನಕ್ಕೆ ಅಗತ್ಯ. ಈ ಕಾರಣದಿಂದಲೇ ಪೂರ್ವಜರು ನೀರು ಮತ್ತು ಗಾಳಿಯನ್ನು ದೇವರಂತೆ ಪೂಜಿಸಿದ್ದರು. ಪ್ರತಿಯೊಬ್ಬರೂ ತಮ್ಮ ತಾಯಿಯ ನೆನಪಿನಲ್ಲಿ ಕನಿಷ್ಠ ಒಂದು ಗಿಡ ನೆಡಬೇಕು’ ಎಂದರು. `ಪ್ರಸ್ತುತ ಸುಸ್ಥಿರ ಪರಿಸರದ ಅಭಿವೃದ್ಧಿ ಆಗಬೇಕಿದೆ, ಯುವಜನತೆ ಪ್ರಕೃತಿ ವಿನಾಶದ ಪರಿಣಾಮಗಳ ಬಗ್ಗೆ ಅರಿತು, ಅವುಗಳನ್ನು ತಡೆಯುವುದರ ಜೊತೆಗೆ ಅದರ ಬಗ್ಗೆ ಎಲ್ಲರಿಗೂ ಅರಿವು ಮೂಡಿಸಬೇಕು, ಮಾನವೀಯತೆ ಗುಣಗಳನ್ನು ಬೆಳೆಸಿಕೊಂಡು ಜೀವನದ ಉತ್ತಮ ಹಾದಿಯಲ್ಲಿ ನಡೆಯಬೇಕು. ಕಳೆದ ದಶಕದಿಂದ ಭಾರತ ಆರ್ಥಿಕವಾಗಿ ಹೆಚ್ಚಿನ ಬೆಳವಣಿಗೆ ಹೊಂದಿದೆ. ಈ ಬೆಳವಣಿಗೆಯಿಂದ ಇಡೀ ಜಗತ್ತಿನ ದೃಷ್ಟಿ ನಮ್ಮ ಮೇಲಿದೆ. ನಮ್ಮ ದೇಶದ ಯುವಶಕ್ತಿ ಜಗತ್ತಿನ ಚಿತ್ರಣ ಬದಲಿಸುವ ಸಾಮರ್ಥ್ಯ ಹೊಂದಿದೆ ಎಂಬುದನ್ನು ನೆನಪಿನಲ್ಲಿಡಿ’ ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು. ಈ ವೇಳೆ ವಿದ್ಯಾರ್ಥಿಗಳೊಂದಿಗೆ ಸಂಸತ್ ಭವನದಲ್ಲಿ ಸಂವಾದ ನಡೆಸುವುದಾಗಿ ಉಪ ರಾಷ್ಟçಪತಿಗಳು ಘೋಷಿಸಿದರು.

ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಭೀಮಣ್ಣ ನಾಯ್ಕ, ಧಾರವಾಡ ಕೃಷಿ ವಿಶ್ವವಿದ್ಯಾಲಯದ ಉಪ ಕುಲಪತಿ ಪಿ ಎಲ್ ಪಾಟೀಲ ಇದ್ದರು. ಅರಣ್ಯ ಕಾಲೇಜಿನ ಡೀನ್ ಆರ್.ವಾಸುದೇವ ಇದ್ದರು.

  • Related Posts

    ನವದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ

    Share this… Facebook Pinterest Twitter Linkedin Whatsappನವದೆಹಲಿಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇಂದು ನವದೆಹಲಿಯಲ್ಲಿ ನಡೆದ…

    ಬಿಜೆಪಿ ಗೆಲುವು: ಬಿ.ಸಿ. ಪಾಟೀಲ ಹೇಳಿದ್ದೇನು?

    Share this… Facebook Pinterest Twitter Linkedin Whatsappರಾಜಸ್ಥಾನದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿ.ಸಿ.…

    You cannot copy content of this page