6

ಅಡುಗೆ ಸಿಲೆಂಡರ್ ದುರ್ಬಳಕೆ: ಸಿಕ್ಕಿಬಿದ್ದರೆ ಕಠಿಣ ಕ್ರಮ!

ಉತ್ತರ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆಯ ಉದ್ದೇಶಕ್ಕೆ ನೀಡಲಾಗುವ ಅಡುಗೆ ಅನಿಲದ ಸಿಲೆಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುವವರ ಮೇಲೆ ಜಿಲ್ಲಾಡಳಿತ ನಿಗಾವಿರಿಸಿದೆ.

`ಗೃಹ ಬಳಕೆ ಸಿಲೆಂಡರ್ ವಾಣಿಜ್ಯ ಉದ್ದೇಶಕ್ಕೆ ಬಳಕೆಯಾಗದ ರೀತಿಯಲ್ಲಿ ಹೆಚ್ಚಿನ ನಿಗಾವಹಿಸಿ’ ಎಂದು ಜಿಲ್ಲಾಧಿಕಾರಿ ಕೆ ಲಕ್ಷಿö್ಮÃಪ್ರಿಯಾ ಅವರು ಅಧೀನ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದರೊಂದಿಗೆ `ವಾಣಿಜ್ಯ ಚಟುವಟಿಕೆಗಳು ನಡೆಯುವ ಸ್ಥಳಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿ’ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವಾಣಿಜ್ಯ ಬಳಕೆಯ ಅನಿಲ ಸಿಲೆಂಡರ್‌ಗಳಿಗಿoತ ಕಡಿಮೆ ದರದಲ್ಲಿ ಗೃಹ ಬಳಕೆಯ ಉದ್ದೇಶಕ್ಕೆ ಸಿಲೆಂಡರ್‌ಗಳನ್ನು ವಿತರಿಸಲಾಗುತ್ತಿದೆ. ಹೀಗಾಗಿ ಈ ಸಿಲೆಂಡರ್‌ಗಳನ್ನು ಕೆಲವರು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಅನುಮಾನ ವ್ಯಕ್ತವಾಗಿದೆ. ಕೆಲವು ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದು ಅಲ್ಲಿ ಸಿಲೆಂಡರ್ ದುರುಪಯೋಗ ಸಾಧ್ಯತೆ ಹೆಚ್ಚಿದೆ. ಹೀಗಾಗಿ `ಗ್ಯಾಸ್ ಏಜೆನ್ಸಿಗಳ ಅನಿಲ ವಿತರಣೆಯ ದಾಖಲೆ ಹಾಗೂ ವಾಣಿಜ್ಯ ಅನಿಲ ಬಳಕೆದಾರರ ಅನಿಲ ಬಳಕೆಯ ಮಾಹಿತಿ ದಾಖಲೆಗಳನ್ನು ಪರಿಶೀಲನೆ ನಡೆಸಿ’ ಎಂದು ಡೀಸಿ ಸೂಚಿಸಿದ್ದಾರೆ.

ಇನ್ನೂ `ಪಡಿತರ ಚೀಟಗಳಿಗೆ ಇ ಕೆವೈಸಿ ಮಾಡುವ ಕಾರ್ಯದಲ್ಲಿ ಜಿಲ್ಲೆಯಲ್ಲಿ ಇದುವರೆಗೆ 98.02 ಪ್ರಗತಿ ಸಾಧಿಸಿದೆ. ಈ ಕಾರ್ಯದಲ್ಲಿ ಶೇ 100 ರಷ್ಟು ಪ್ರಗತಿ ಸಾಧಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಿ’ ಎಂದವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಜಿಲ್ಲೆಯಲ್ಲಿನ ಒಟ್ಟು 410 ನ್ಯಾಯಬೆಲೆ ಅಂಗಡಿಗಳಲ್ಲಿ 402 ಅಂಗÀಡಿಗಳಿಗೆ ಪಾಯಿಂಟ್ ಆಫ್ ಸೇಲ್ (ಪಿಓಎಸ್) ಯಂತ್ರಗಳನ್ನು ಅಳವಡಿಸಿದ್ದು, ಬಾಕಿ ಇರುವ ಅಂಗಡಿಗಳಿಗೆ ಇಂಟರ್ನೆಟ್ ಸೌಲಭ್ಯದ ಕೊರತೆಯಿಂದ ಈ ಯಂತ್ರಗಳನ್ನು ಅಳವಡಿಸಿಕೊಳ್ಳಲು ಸಾಧ್ಯವಾಗಿಲ್ಲದರ ಬಗ್ಗೆ ಅವರು ಪ್ರಶ್ನಿಸಿದ್ದಾರೆ. `ಬಿ.ಎಸ್.ಎನ್.ಎಲ್ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಈ ಪ್ರದೇಶಗಳಿಗೆ ಶೀಘ್ರದಲ್ಲಿ ಇಂಟರ್ನೆಟ್ ಸೌಲಭ್ಯ ಪಡೆದು (ಪಿಓಎಸ್) ಯಂತ್ರಗಳನ್ನು ಅಳವಡಿಸುವ ಮೂಲಕ ಸಾರ್ವಜನಿಕ ಪಡಿತರ ವಿತರಣೆಯಲ್ಲಿ ಸಂಪೂರ್ಣ ಪಾರದರ್ಶಕತೆ ಮೂಡಿಸಿ’ ಎಂದು ಹೇಳಿದ್ದಾರೆ.

`ಅನ್ನಭಾಗ್ಯ ಯೋಜನೆ ಅಡಿಯಲ್ಲಿ ನೀಡುವ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾಗುವುದನ್ನು ತಡೆಯಬೇಕು. ಗಡಿ ತಾಲೂಕುಗಳಲ್ಲಿ ಹೆಚ್ಚಿನ ತಪಾಸಣೆಯನ್ನು ಕೈಗೊಳ್ಳಬೇಕು’ ಎಂದವರು ಆದೇಶಿಸಿದ್ದಾರೆ. `ಆಹಾರ ಧಾನ್ಯಗಳನ್ನು ಸಗಟು ಗೋದಾಮುಗಳಲ್ಲಿ ದಾಸ್ತಾನು ಮಾಡುವಾಗ ವೈಜ್ಞಾನಿಕವಾಗಿ ಮತ್ತು ಕ್ರಮಬದ್ದವಾಗಿ ಜೋಡಿಸಿರಬೇಕು. ಯಾವುದೇ ಕಾರಣಕ್ಕೂ ಆಹಾರಧಾನ್ಯಗಳು ಹಾಳಾಗದಂತೆ ಅತ್ಯಂತ ಎಚ್ಚರ ವಹಿಸಬೇಕು’ ಎಂದು ಅವರು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪನಿರ್ದೇಶಕ ಮಂಜುನಾಥ ರೇವಕರ್ ಅವರಿಗೆ ಸೂಚಿಸಿದ್ದಾರೆ.

  • Related Posts

    ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್ ಐಆರ್ ವಿಚಾರದಲ್ಲಿ ಚುನಾವಣಾ ಆಯೋಗ ದೂರು ನೀಡದೇ ಯಾವುದೆ ಎಫ್ ಐಆರ್ ಮಾಡಲು ಅವಕಾಶ ಇಲ್ಲ:ಬಸವರಾಜ ಬೊಮ್ಮಾಯಿ ಸಿಎಂ ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ:ಬಸವರಾಜ ಬೊಮ್ಮಾಯಿ…

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    You cannot copy content of this page