6

ದೌರ್ಜನ್ಯ ನಿಯಂತ್ರಣ ಕಾಯ್ದೆ: ಜಿಲ್ಲಾ ಮಟ್ಟದ ಸಮಿತಿಗೆ ಸುರೇಶ ಸಿದ್ದಿ!

ದೌರ್ಜನ್ಯ ನಿಯಂತ್ರಣ ಕಾಯ್ದೆ ಅಡಿ ರಚಿಸಲಾದ ಉತ್ತರ ಕನ್ನಡ ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿಗೆ ಯಲ್ಲಾಪುರದ ಸುರೇಶ ಸಿದ್ದಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅವರು ಈ ಸಮಿತಿಗೆ ಅಧ್ಯಕ್ಷರಾಗಿದ್ದಾರೆ. ಪೊಲೀಸ್ ಅಧೀಕ್ಷಕ ಎಂ ನಾರಾಯಣ ಅವರು ಸಮಿತಿಯ ಸದಸ್ಯರಾಗಿದ್ದಾರೆ. ಸರ್ಕಾರಿ ಅಭಿಯೋಜಕರು, ಕೃಷಿ ನಿರ್ದೇಶಕರು, ಪ್ರಾಧ್ಯಾಪಕರು ಸೇರಿ ವಿವಿಧ ಕ್ಷೇತ್ರದ ಗಣ್ಯರನ್ನು ಈ ಸಮಿತಿ ಸದಸ್ಯರನ್ನಾಗಿಸಿಕೊಂಡಿದೆ. ಅವರ ಜೊತೆ ಸುರೇಶ ಸಿದ್ದಿ ಸಹ ಸದಸ್ಯರಾಗಿದ್ದು, ಗುರುವಾರ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಮಿತಿಯ ಮೊದಲ ಸಭೆ ಎದುರಿಸಿದರು.

ಸುರೇಶ ಸಿದ್ದಿ ಅವರು ಯಲ್ಲಾಪುರದ ನಂದೂಳ್ಳಿಯ ಸೂಳಗಾರಿನವರು. ಹಿಂದುಳಿದ ಬುಡಕಟ್ಟು ಸಮುದಾಯದ ಅವರು ಗ್ರಾಮೀಣ ಭಾಗದಲ್ಲಿ ಗ್ರಾಮ ಒನ್ ಕೇಂದ್ರದ ಮೂಲಕ ಸ್ವ ಉದ್ಯೋಗ ಮಾಡಿಕೊಂಡಿದ್ದಾರೆ.  ಈ ಹಿಂದೆ 10 ವರ್ಷಗಳ ಕಾಲ ಕಿರವತ್ತಿ ತಪಾಸಣಾ ಕೇಂದ್ರದಲ್ಲಿ ಅವರು ಸೇವೆ ಸಲ್ಲಿಸಿದ್ದರು. ಲಾಂಪ್ಸ ಸೊಸೈಟಿಯಲ್ಲಿ ಸಹ ಅವರ ಕರ್ತವ್ಯ ನಿಭಾಯಿಸಿದ್ದರು. ಸದ್ಯ ಗ್ರಾಮ ಒನ್ ಕೇಂದ್ರದ ಮೂಲಕ ಸರ್ಕಾರಿ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಮಹತ್ವದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ಅವರ ಸೇವೆ ಪರಿಗಣಿಸಿ ಸರ್ಕಾರ ಉತ್ತರ ಕನ್ನಡ ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿಗೆ ಆಯ್ಕೆ ಮಾಡಿದೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page