6
  • Latest
DC interested in empowering Anganwadis: Nutritional treatment for malnourished children!

ಅಂಗನವಾಡಿಗಳಿಗೆ ಶಕ್ತಿ ತುಂಬಲು ಡೀಸಿಗೆ ಆಸಕ್ತಿ: ಅಪೌಷ್ಠಿಕ ಮಕ್ಕಳಿಗೆ ಪೌಷ್ಠಿಕ ಚಿಕಿತ್ಸೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅಂಗನವಾಡಿಗಳಿಗೆ ಶಕ್ತಿ ತುಂಬಲು ಡೀಸಿಗೆ ಆಸಕ್ತಿ: ಅಪೌಷ್ಠಿಕ ಮಕ್ಕಳಿಗೆ ಪೌಷ್ಠಿಕ ಚಿಕಿತ್ಸೆ!

AchyutKumar by AchyutKumar
in ರಾಜ್ಯ
DC interested in empowering Anganwadis: Nutritional treatment for malnourished children!
advt advt advt
ADVERTISEMENT

ಕಳೆದ ಮೂರು ತಿಂಗಳ ಅವಧಿಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ 147 ಮಕ್ಕಳು ಅಪೌಷ್ಠಿಕತೆಯಿಂದ ಬಳಲುತ್ತಿರುವುದು ಗಮನಕ್ಕೆ ಬಂದಿದೆ. `ಈ ಎಲ್ಲಾ ಮಕ್ಕಳಿಗೆ ಸೂಕ್ತ ಚಿಕಿತ್ಸೆ ಒದಗಿಸಬೇಕು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಸೂಚನೆ ನೀಡಿದ್ದಾರೆ.

ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಭೆ ನಡೆಸಿದ ಅವರು `ಎಲ್ಲಾ ಅಂಗನವಾಡಿಗಳ ವ್ಯಾಪ್ತಿಯಲ್ಲಿ ತೀವ್ರ ಅಪೌಷ್ಠಿಕತೆ ಮತ್ತು ಮಧ್ಯಮ ತೀವ್ರ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಬೇಕು. ಅವರಿಗೆ ಆರೋಗ್ಯ ಇಲಾಖೆಯ ಮೂಲಕ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಕೊಡಿಸಬೇಕು. ಯಾವುದೇ ಮಗು ಅಪೌಷ್ಠಿಕತೆಯಿಂದ ಬಳಲದಂತೆ ಎಚ್ಚರವಹಿಸಬೇಕು’ ಎಂದು ಸೂಚಿಸಿದರು. `ಮಕ್ಕಳು ಸಂಪೂರ್ಣ ಆರೋಗ್ಯವಂತರಾಗುವವರೆಗೆ ನಿಗಾವಹಿಸುವುದರ ಜೊತೆಗೆ ಎಲ್ಲಾ ಮಕ್ಕಳ ಸಂಪೂರ್ಣ ವಿವರಗಳನ್ನು ಇಟ್ಟುಕೊಳ್ಳಬೇಕು’ ಎಂದರು.

ADVERTISEMENT
ADVERTISEMENT

`ಮಕ್ಕಳು ಸಂಪೂರ್ಣ ಗುಣಮುಖರಾಗುವವರೆಗೆ ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಸೂಕ್ತ ಚಿಕಿತ್ಸೆ ಮತ್ತು ಪೌಷ್ಠಿಕ ಆಹಾರ ಒದಗಿಸಬೇಕು. ವೈದ್ಯಾಧಿಕಾರಿಗಳು ಅಂಗನವಾಡಿ ಕೇಂದ್ರಗಳಿಗೆ ನಿರಂತರವಾಗಿ ಭೇಟಿ ನೀಡಿ ಮಕ್ಕಳ ಆರೋಗ್ಯ ಕುರಿತು ತಪಾಸಣೆ ನಡೆಸಬೇಕು’ ಎಂದು ಡೀಸಿ ಸೂಚಿಸಿದರು. `ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಂಗನವಾಡಿಗಳಿಗೆ ಸ್ವಂತ ಕಟ್ಟಡ ಒದಗಿಸುವ ಕುರಿತು ಕ್ರಮ ಜರುಗಿಸಬೇಕು. ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿನ ಅಂಗನವಾಡಿಗಳ ವ್ಯಾಪ್ತಿಯ ಸಂಬoಧಪಟ್ಟ ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಮತ್ತು ತಹಶೀಲ್ದಾರ್‌ಗಳೊಂದಿಗೆ ಚರ್ಚಿಸಿ ಆ ಭಾಗದಲ್ಲಿ ಸರಕಾರಿ ಜಮೀನು ಲಭ್ಯವಿರುವ ಬಗ್ಗೆ ಪರಿಶೀಲಿಸಬೇಕು’ ಎಂದು ಸೂಚಿಸಿದರು. `ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯಡಿ ಗರ್ಭಿಣಿ ಮಹಿಳೆಯರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಪಾವತಿಸುವ ಸಹಾಯಧನವನ್ನು ನಿಗಧಿತ ಅವಧಿಯಲ್ಲಿ ಪಾವತಿಸಬೇಕು. ಬ್ಯಾಂಕ್ ಖಾತೆಯಲ್ಲಿ ಕಂಡು ಬರುವ ಸಮಸ್ಯೆಗಳ ಕುರಿತಂತೆ ಲೀಡ್ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಿ ವಿಶೇಷ ಕ್ಯಾಂಪ್ ಆಯೋಜಿಸಿ ಬ್ಯಾಂಕಿ0ಗ್ ಕುರಿತ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು’ ಎಂದು ತಿಳಿಸಿದರು.

Advertisement. Scroll to continue reading.

`ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಟ ತಡೆ ಕುರಿತಂತೆ ಗ್ರಾಮ ಮಟ್ಟದಲ್ಲಿ ನಿಗಧಿತವಾಗಿ ಸಭೆಗಳನ್ನು ನಡೆಸಬೇಕು. ಗ್ರಾಮ ಮತ್ತು ತಾಲೂಕು ಮಟ್ಟದಲ್ಲಿ ಈಗಾಗಲೇ ರಚಿಸಲಾಗಿರುವ ಕಾವಲು ಸಮಿತಿಗಳು ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು’ ಎಂದರು. `ಸಾಂತ್ವನ ಯೋಜನೆಯ ಮೂಲಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಅಗತ್ಯ ನೆರವು, ಆಪ್ತ ಸಮಾಲೋಚನೆ ಒದಗಿಸುವುದರ ಜೊತೆಗೆ ಅವರಿಗೆ ಸ್ವಯಂ ಉದ್ಯೋಗ ಮತ್ತು ಕೌಶಲ್ಯ ತರಬೇತಿಗಳನ್ನು ನೀಡಿ ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಬೇಕು. ಕಾನೂನು ಸೇವಾ ಪ್ರಾಧಿಕಾರದ ಮೂಲಕ ಉಚಿತ ಕಾನೂನು ನೆರವು ಒದಗಿಸಬೇಕು. ಸಾಂತ್ವನ ಯೋಜನೆಯ ಕುರಿತಂತೆ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಜಾಗೃತಿ ಮೂಡಿಸಬೇಕು. ತಾಲೂಕು ಮಹಿಳಾ ಸ್ವ ಸಹಾಯ ಸಂಘದ ಸಭೆಗಳಲ್ಲಿ ಅರಿವು ಮೂಡಿಸಬೇಕು’ ಎಂದರು.

Advertisement. Scroll to continue reading.

ಕೌಟುoಬಿಕ ಹಿಂಸೆಯಿoದ ಮಹಿಳೆಯರ ಸಂರಕ್ಷಣೆ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳನ್ನು ಆದಷ್ಟು ಶೀಘ್ರದಲ್ಲಿ ಇತ್ಯರ್ಥಪಡಿಸಿ ನೊಂದ ಮಹಿಳೆಗೆ ನ್ಯಾಯ ಒದಗಿಸುವಂತೆ ತಿಳಿಸಿದರು. `ಒನ್ ಸ್ಟಾಫ್ ಸೆಂಟರ್ ಮೂಲಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಆಪ್ತ ಸಮಾಲೋಚನೆ, ವೈದ್ಯಕೀಯ, ಪೊಲೀಸ್,ಕಾನೂನು ಸೇರಿದಂತೆ ಎಲ್ಲಾ ರೀತಿಯ ಸಮಗ್ರ ನೆರವು ಒದಗಿಸಬೇಕು’ ಎಂದು ಸೂಚಿಸಿದರು.

ಈ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ.ನಟರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ವಿರುಪಾಕ್ಷ ಗೌಡ ಪಾಟೀಲ್ ಹಾಗೂ ಜಿಲ್ಲೆಯ ಎಲ್ಲಾ ತಾಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಜರಿದ್ದರು.

 

ShareSendTweetShare
ADVERTISEMENT
Previous Post

ಸಿಲೆಂಟರ್ ಸ್ಪೋಟಕ್ಕೆ ಗುಜುರಿ ಗೋದಾಮು ನಾಶ!

Next Post

ಯಕ್ಷ ತುಳಸಿಗೆ ಗ್ಲೋಬಲ್ ಅವಾರ್ಡ!

Next Post
Global Award for Yaksha Tulsi!

ಯಕ್ಷ ತುಳಸಿಗೆ ಗ್ಲೋಬಲ್ ಅವಾರ್ಡ!

ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ಹೊಳೆಯಲ್ಲಿ ತೇಲಿದ ಶವ: ಮಾಲಕನನ್ನು ಗುರುತಿಸಿದ ಶ್ವಾನದಳ!

Gambling in the name of Friends Club: 17 people sentenced to prison!

ಕಾಡಿನಲ್ಲಿ ಕಾನೂನುಬಾಹಿರ ಆಟ: ಪೊಲೀಸರನ್ನು ಕಂಡ ಜೂಜುಕೋರರು ಕಕ್ಕಾಬಿಕ್ಕಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.