6
  • Latest
Bomb attack there - building collapse here None of this is true.. Wartime drills!

ಅಲ್ಲಿ ಬಾಂಬ್ ದಾಳಿ – ಇಲ್ಲಿ ಕಟ್ಟಡ ಕುಸಿತ: ಇದ್ಯಾವುದು ನಿಜವಲ್ಲ.. ಯುದ್ಧಕಾಲದ ಸಮರಾಭ್ಯಾಸ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಲ್ಲಿ ಬಾಂಬ್ ದಾಳಿ – ಇಲ್ಲಿ ಕಟ್ಟಡ ಕುಸಿತ: ಇದ್ಯಾವುದು ನಿಜವಲ್ಲ.. ಯುದ್ಧಕಾಲದ ಸಮರಾಭ್ಯಾಸ!

AchyutKumar by AchyutKumar
in ಸ್ಥಳೀಯ
Bomb attack there - building collapse here None of this is true.. Wartime drills!

ಉತ್ತರ ಕನ್ನಡ ಜಿಲ್ಲೆಯಲ್ಲಿ ಮೇ 12ರ ಒಂದೇ ದಿನ ಹಲವು ಅವಘಡ ನಡೆದಿದೆ. ಬಾಂಬ್ ದಾಳಿ, ಅಗ್ನಿ ದುರಂತ, ಕಟ್ಟಡ ಕುಸಿತ, ಅಣು ವಿಕರಣ ಸೋರಿಕೆ ಸೇರಿ ಹಲವು ಅವಘಡದಲ್ಲಿ ಸಿಲುಕಿದ್ದ ಸಾವಿರಾರು ಜನರನ್ನು ಜಿಲ್ಲಾಡಳಿತ ರಕ್ಷಿಸಿದೆ. ಜಿಲ್ಲಾಡಳಿತ ಜನರನ್ನು ರಕ್ಷಿಸಿದ್ದು ಸತ್ಯ. ಆದರೆ, ನಡೆದ ದುರಂತ ನಿಜವಲ್ಲ!

ADVERTISEMENT

ತುರ್ತು ಸನ್ನಿವೇಶವನ್ನು ಕೃತಕವಾಗಿ ಸೃಷ್ಠಿಸಿಕೊಂಡ ಜಿಲ್ಲಾಡಳಿತ ಜನ ಜಾಗೃತಿ ಹಾಗೂ ಅಧಿಕಾರಿ-ಸಿಬ್ಬಂದಿ ತರಬೇತಿಗಾಗಿ ಈ ದಿನ ಅಣಕು ಪ್ರದರ್ಶನ ನಡೆಸಿದೆ. ಅದರ ಪ್ರಕಾರ ಕಾರವಾರದ ಗ್ರಾಸಿಂ ಅನಿಲ ಘಟಕದಲ್ಲಿ ಬಾಂಬ್ ದಾಳಿಯಿಂದ ಹಾನಿಯಾದ ಕಟ್ಟಡದಲ್ಲಿ ಸಿಲುಕಿದ್ದ 37 ಮಂದಿಯ ಸುರಕ್ಷಿತವಾಗಿ ರಕ್ಷಿಸಲಾಗಿದೆ. ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಬೆಂಕಿ ಆಕಸ್ಮಿಕದಿಂದ 11 ಮಂದಿಯ ಜೀವ ಕಾಪಾಡಲಾಗಿದೆ. ನೌಕಾನೆಲೆ ಪ್ರದೇಶದ ಸಿವಿಲ್ ಕಾಲೋನಿಯಲ್ಲಿ ಬೆಂಕಿ ಆಕಸ್ಮಿಕದಿಂದ 11 ಮಂದಿಯನ್ನು ರಕ್ಷಿಸಲಾಗಿದ್ದು, ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದ ಬಾಂಬ್ ದಾಳಿಯಿಂದ ಗಾಯಗೊಂಡ 10 ಜನರನ್ನು ಬೇರೆ ಕಡೆ ಸ್ಥಳಾಂತರಿಸಲಾಯಿತು. ರವೀಂದ್ರ ನಾಥ್ ಕಡಲತೀರದಲ್ಲಿ ಸಂಭವಿಸಿದ ಬಾಂಬ್ ದಾಳಿಯಿಂದ ಗಾಯಗೊಂಡವರನ್ನು ರಕ್ಷಿಸಿ ಸಮುದ್ರ ದಡದಲ್ಲಿದ್ದವರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಯಿತು. ಕೈಗಾ ಅಣು ವಿದ್ಯುತ್ ಸ್ಥಾವರದ ಅಣು ವಿಕಿರಣ ಸೋರಿಕೆಯ ಮುನ್ನೆಚ್ಚರಿಕಾ ಕ್ರಮವಾಗಿ ಹರ್ಟುಗಾ ಗ್ರಾಮದಲ್ಲಿದ್ದವರನ್ನು ಅಲ್ಲಿಂದ ಒಕ್ಕಲೆಬ್ಬಿಸಲಾಯಿತು.

ಯುದ್ದದಂತಹ ತುರ್ತು ಸಂದರ್ಭದಲ್ಲಿ ಉಂಟಾಗುವ ಸಂಭವನೀಯ ಅಪಘಾತಗಳಿಂದ ಸಾರ್ವಜನಿಕರನ್ನು ರಕ್ಷಿಸುವ ಕುರಿತು ಅರಿವು ಮೂಡಿಸಲು `ಆಪರೇಶನ್ ಅಭ್ಯಾಸ್’ ಎಂಬ ಕಾರ್ಯಾಚರಣೆಯನ್ನು ಜಿಲ್ಲಾಡಳಿತ ಯಶಸ್ವಿಯಾಗಿ ಮುಗಿಸಿತು. ಕೇಂದ್ರ ಗೃಹಸಚಿವಾಲಯದ ನಿರ್ದೇಶನದಂತೆ ಸೋಮವಾರ ಕಾರವಾರದ ವಿವಿಧ ಭಾಗಗಳಲ್ಲಿ ಅಣಕು ಕಾರ್ಯಾಚರಣೆಗಳನ್ನು ನಡೆಸಲಾಯಿತು. ಬಿಣಗಾದ ಗ್ರಾಸಿಂ ಇಂಡಸ್ಟ್ರೀಸ್‌ನಲ್ಲಿ ಕಟ್ಟಡ ಕುಸಿದು ಬಿದ್ದಾಗ ಸ್ಥಳದಲ್ಲಿದ್ದ ಜನರನ್ನು ರಕ್ಷಣೆ ಮಾಡುವ ಬಗ್ಗೆ, ಕೈಗಾ ಅಣು ವಿದ್ಯುತ್ ಕೇಂದ್ರದ ಒಳಗೆ ಬೆಂಕಿ ಅವಘಡದಿಂದ ರಕ್ಷಣೆ ಮಾಡುವ ಬಗ್ಗೆ ಮೊದಲೇ ನಿರ್ಧರಿಸಲಾಗಿತ್ತು. ಅಮದಳ್ಳಿಯ ನೇವಲ್ ಬೇಸ್ ಬಳಿ ಸಿವಿಲಿಯನ್ ಕಾಲೋನಿಯಲ್ಲಿ ಅಗ್ನಿ ಅವಘಡದಿಂದ ರಕ್ಷಣಾ ಕಾರ್ಯಾಚರಣೆ, ಕಾರವಾರದ ರವೀಂದ್ರನಾಥ ಠಾಗೋರ ಬೀಚ್‌ನಲ್ಲಿ ಬಾಂಬ್ ದಾಳಿಯಿಂದ ಸಾರ್ವಜನಿಕರನ್ನು ರಕ್ಷಣೆ ಮಾಡುವ ಬಗ್ಗೆ ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಹರ್ಟುಗಾ ಗ್ರಾಮದಿಂದ ಸಾರ್ವಜನಿಕರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ, ರೈಲ್ವೆ ನಿಲ್ದಾಣದಲ್ಲಿನ ಬಾಂಬ್ ದಾಳಿಯಿಂದ ಸಾರ್ವಜನಿಕರನ್ನು ರಕ್ಷಣೆ ಮಾಡುವ ಅಣಕು ಕಾರ್ಯಾಚರಣೆಗಳನ್ನು ಯಶಸ್ವಿಯಾಗಿ ಮುಗಿಸಲಾಯಿತು.

Advertisement. Scroll to continue reading.

ಈ ಕಾರ್ಯಾಚರಣೆಯಲ್ಲಿ ನೌಕಾಪಡೆ, ಕೋಸ್ಟ್ ಗಾರ್ಡ್, ಕೇಂದ್ರಿಯ ಕೈಗಾರಿಕಾ ಭದ್ರತಾ ಪಡೆ, ಎನ್.ಡಿ.ಆರ್.ಎಫ್, ಪೊಲೀಸ್, ಕರಾವಳಿ ಪೊಲೀಸ್, ರೈಲ್ವೆ ರಕ್ಷಣಾ ಪಡೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಗೃಹ ರಕ್ಷಕ ದಳ, ಕಂದಾಯ, ಆರೋಗ್ಯ, ಮೀನುಗಾರಿಕೆ, ನಗರಸಭೆ ಸೇರಿದಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಎನ್.ಎಸ್.ಎಸ್., ಎನ್.ಸಿ.ಸಿ. ಸೇರಿದಂತೆ ವಿವಿಧ ಸ್ವಯಂ ಸೇವಾ ಸಂಘಟನೆಗಳ ಸದಸ್ಯರು ಸಕ್ರಿಯವಾಗಿ ಭಾಗವಹಿಸಿದ್ದರು. ಸಂಜೆ 7.30ರಿಂದ 8 ಗಂಟೆಯ ಅವಧಿಯಲ್ಲಿ ಬ್ಲ್ಯಾಕ್ ಔಟ್ ಕಾರ್ಯಾಚರಣೆ ನಡೆಸಲಾಗಿದ್ದು, ಈ ಅವಧಿಯಲ್ಲಿ ಸೈರನ್ ಮೊಳಗಿದ ತಕ್ಷಣ ಕಾರವಾರ ನಗರಪ್ರದೇಶದಲ್ಲಿ ಸಾರ್ವಜನಿಕರು ತಮ್ಮ ಮನೆಗಳ ಕಿಟಕಿ, ಬಾಗಿಲು ಮುಚ್ಚಿ, ವಿದ್ಯುತ್ ದೀಪಗಳನ್ನು ಬಂದ್ ಮಾಡಿದರು.

Advertisement. Scroll to continue reading.

ವಾಹನ ಸವಾರರು ತಾವು ಚಲಾಯಿಸುತ್ತಿದ್ದ ವಾಹನಗಳನ್ನು ಬಂದ್ ಮಾಡಿ ಹೆಡ್ ಲೈಟ್ ಆರಿಸಿ ರಸ್ತೆಯ ಪಕ್ಕದಲ್ಲಿ ಸುರಕ್ಷಿತವಾಗಿ ನಿಂತರು. ಬ್ಲಾಕ್ ಔಟ್ ಕಾರ್ಯಾಚರಣೆಗಾಗಿ ಒಟ್ಟು 13 ಸೈರನ್ ಕೂಗಿದವು.

Previous Post

ಮದ್ಯ ಮಾರಾಟದ ಒಡತಿ.. ಈ ಮಹಿಳಾ ಮಾರಾಟಗಾರ್ತಿ!

Next Post

ಕಿಕ್ಕು ನೀಡದ ಬೀಡಿ-ಸಿಗರೇಟು: ಗಾಂಜಾ ಗುಂಗಿನಲ್ಲಿ ತೇಲಾಡಿದ ಮಹೇಶ!

Next Post
A yoga teacher by name: What he did was intoxicating!

ಕಿಕ್ಕು ನೀಡದ ಬೀಡಿ-ಸಿಗರೇಟು: ಗಾಂಜಾ ಗುಂಗಿನಲ್ಲಿ ತೇಲಾಡಿದ ಮಹೇಶ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ