6
  • Latest
Karwarigas hit by artificial flood What are the preparations this time

ಕೃತಕ ಪ್ರವಾಹದಿಂದ ಕೆಂಗಟ್ಟ ಕಾರವಾರಿಗರು: ಈ ಬಾರಿಯ ಸಿದ್ಧತೆ ಏನು?

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಕೃತಕ ಪ್ರವಾಹದಿಂದ ಕೆಂಗಟ್ಟ ಕಾರವಾರಿಗರು: ಈ ಬಾರಿಯ ಸಿದ್ಧತೆ ಏನು?

AchyutKumar by AchyutKumar
in ರಾಜ್ಯ
Karwarigas hit by artificial flood What are the preparations this time

ಕಳೆದ ಮಳೆಗಾಲದ ಅವಧಿಯಲ್ಲಿ ಕಾರವಾರದ ಅರಗಾ, ಚೆಂಡಿಯಾ, ತೋಡೂರು, ಮುದಗಾ, ಬಿಣಗಾ ಪ್ರದೇಶದ ಜನ ಅನುಭವಿಸಿದ ಹಿಂಸೆ ಯಾರಿಗೂ ಬೇಡ. ನೌಕಾನೆಲೆಯವರ ಅತಿರೇಕದ ವರ್ತನೆಯಿಂದ ಆ ಭಾಗದಲ್ಲಿ ಕೃತಕ ಪ್ರವಾಹ ಎದುರಾಗಿದ್ದು, ಜನರ ಜೊತೆ ಜಿಲ್ಲಾಡಳಿತವೂ ಹೈರಣಾಗಿತ್ತು. ಹೀಗಾಗಿ ಈ ಬಾರಿ ಹಾಗಾಗದಂತೆ ಎಚ್ಚರವಹಿಸಲು ಜಿಲ್ಲಾಧಿಕಾರಿ ಕೆ.ಲಕ್ಷಿö್ಮÃಪ್ರಿಯಾ ಅವರು ಅಧೀನ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ADVERTISEMENT

`ಸೀಬರ್ಡ್ ಮತ್ತು ನೌಕಾನೆಲೆ ಪ್ರದೇಶಗಳಲ್ಲಿನ ಗ್ರಾಮಗಳ ವ್ಯಾಪ್ತಿಯಲ್ಲಿ ಮಳೆ ನೀರು ನಿಂತು ಸಾರ್ವಜನಿಕರಿಗೆ ತೊಂದರೆಯಾಗದ0ತೆ ನೊಡಿಕೊಳ್ಳಬೇಕು. ಈಗಾಗಲೇ ಕೈಗೊಂಡಿರುವ ಎಲ್ಲಾ ಅಗತ್ಯ ಕಾಮಗಾರಿಗಳನ್ನು ಮುಕ್ತಾಯಗೊಳಿಸಲಾಗಿದ್ದು, ಮಳೆ ನೀರು ಸರಾಗವಾಗಿ ಹರಿಯಲು ವ್ಯವಸ್ಥೆ ಮಾಡಬೇಕು’ ಎಂದು ಡೀಸಿ ಸೂಚಿಸಿದರು. `ನೀರು ಸರಾಗವಾಗಿ ತೆರಳಲು ವ್ಯವಸ್ಥೆ ಮಾಡಲಾಗಿದೆ’ ಎಂದು ಸೀಬರ್ಡ್ ಯೋಜನೆಯ ಅಧಿಕಾರಿಗಳು ಮಾಹಿತಿ ನೀಡಿದರು.

`ಹೆದ್ದಾರಿ ಪ್ರಾಧಿಕಾರಿದಿಂದ ಜಿಲ್ಲೆಯಲ್ಲಿ ಕೈಗೊಂಡಿರುವ ರಸ್ತೆ ಕಾಮಗಾರಿಗಳನ್ನು ಈ ತಿಂಗಳೊಳಗೆ ಮುಕ್ತಾಯಗೊಳಿಸಬೇಕು. ರಸ್ತೆಗಳ ಪಕ್ಕದಲ್ಲಿ ಚರಂಡಿ ಕಾಮಗಾರಿಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವ ಹಾಗೂ ಮಳೆ ನೀರು ರಸ್ತೆಯಲ್ಲಿ ನಿಲ್ಲದಂತೆ ಎಚ್ಚರವಹಿಸಬೇಕು. ಶಿರಸಿ-ಕುಮಟಾ ರಸ್ತೆಯಲ್ಲಿ ಕೈಗೊಂಡಿರುವ ಎಲ್ಲಾ ಕಾಮಗಾರಿಗಳನ್ನು ಮೇ ಅಂತ್ಯದೊಳಗೆ ಸಂಪೂರ್ಣ ಮುಕ್ತಾಯಗೊಳಿಸಬೇಕು. ಈಗಾಗಲೇ ಗುರುತಿಸಲಾಗಿರುವ ಗುಡ್ಡ ಕುಸಿತ ಪ್ರದೇಶದಲ್ಲಿ ಸ್ಪಾರ‍್ಸ್ಗಳನ್ನು ನೇಮಕ ಮಾಡಿ ನಿರಂತರವಾಗಿ ನಿಗಾ ವಹಿಸಬೇಕು, ಹೆದ್ದಾರಿಯಲ್ಲಿ ಅಪಾಯಕಾರಿ ಪ್ರದೇಶಗಳಲ್ಲಿ ಸೂಕ್ತ ಎಚ್ಚರಿಕೆ ಫಲಕ, ಬ್ಯಾರಿಕೇಡ್ ಸೇರಿದಂತೆ ಅಗತ್ಯ ರಕ್ಷಣಾ ಕ್ರಮಗಳನ್ನು ಕೈಗೊಳ್ಳಬೇಕು’ ಎಂದರು.

Advertisement. Scroll to continue reading.

`ಕಳೆದ ಜನವಸತಿ ಪ್ರದೇಶಗಳಿಗೆ ಮಳೆ ನೀರು ನುಗ್ಗಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಪ್ರಸ್ತುತ ಪ್ರದೇಶಗಳಲ್ಲಿ ಈ ಬಾರಿ ಹಿಂದಿನoತೆ ಯಾವುದೇ ಸಮಸ್ಯೆಯಾಗದಂತೆ ಕೈಗೊಂಡಿರುವ ಕಾಮಗಾರಿಗಳನ್ನು ಆದ್ಯತೆಯಲ್ಲಿ ಮುಕ್ತಾಯಗೊಳಿಸಿ ವರದಿ ನೀಡಿ’ ಎಂದು ಸಣ್ಣ ನೀರಾವರಿ ಮತ್ತು ಜಿಲ್ಲಾ ಪಂಚಾಯತ್ ಅಧಿಕಾರಿಗಳಿಗೆ ಡೀಸಿ ಸೂಚಿಸಿದರು. ಪ್ರಸಕ್ತ ಸಾಲಿನ ಮುಂಗಾರು ಅವಧಿಯಲ್ಲಿ ಜಿಲ್ಲೆಯಲ್ಲಿ ಕಂಡು ಬರಬಹುದಾದ ಯಾವುದೇ ರೀತಿಯ ಸಮಸ್ಯೆಗಳನ್ನು ಎದುರಿಸಲು ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ 24*7 ಸನ್ನದ್ದರಾಗಿರುವಂತೆ ಅವರು ಕರೆ ನೀಡಿದರು. `ಎಲ್ಲಾ ತಹಸೀಲ್ದಾರ್ ಕಚೇರಿಗಳಲ್ಲಿ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಕಚೇರಿಗಳಲ್ಲಿ 24*7 ಕಾರ್ಯನಿರ್ವಹಿಸುವ ಕಂಟ್ರೋಲ್ ರೂಂ ತೆರೆಯಬೇಕು. ಜಿಲ್ಲಾಧಿಕಾರಿ ಕಚೇರಿಯಲ್ಲಿನ ಜಿಲ್ಲಾ ತುರ್ತು ಕಾರ್ಯಚರಣೆ ಕೇಂದ್ರದಲ್ಲಿ ಪೊಲೀಸ್, ಅಗ್ನಿಶಾಮಕ, ಅರಣ್ಯ, ಹೆಸ್ಕಾಂ, ಬಿ.ಎಸ್.ಎನ್.ಎಲ್ ಕಚೇರಿಯ ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ನಿಯೋಜಿಸಬೇಕು’ ಎಂದರು.

Advertisement. Scroll to continue reading.

ಶಾಲೆ, ಅಂಗನವಾಡಿ, ಕಾಲೇಜುಗಳ ವ್ಯಾಪ್ತಿಯಲ್ಲಿನ ಅಪಾಯಕಾರಿ ಮರಗಳು ಮತ್ತು ವಿದ್ಯುತ್ ತಂತಿಗಳನ್ನು ತೆರವುಗೊಳಿಸುವ ಕುರಿತಂತೆ ಮತ್ತು ಶಿಥಿಲ ಕಟ್ಟಡಗಳಿದ್ದಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದ ಅವರು, ಸುರಕ್ಷತೆ ಕುರಿತಂತೆ ಆಡಿಟ್ ನಡೆಸಬೇಕು, ಈ ಪ್ರದೇಶಗಳಲ್ಲಿ ಯಾವುದೇ ಅವಘಢಗಳು ಸಂಭವಿಸಿದ್ದಲ್ಲಿ ಸಂಬAಧಪಟ್ಟ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದರು. `ಹೆಸ್ಕಾಂ ವತಿಯಿಂದ ವಿದ್ಯುತ್ ಸಂಪರ್ಕ ಕಡಿತವಾದಲ್ಲಿ ತುರ್ತು ಮರು ಸಂಪರ್ಕಕ್ಕೆ ಅಗತ್ಯವಿರುವ ಉಪಕರಣಗಳು, ವಾಹನಗಳು ಮತ್ತು ಸಿಬ್ಬಂದಿಗಳನ್ನು ಸಿದ್ದವಾಗಿಟ್ಟುಕೊಂಡಿರಬೇಕು, ಲೋಕೋಪಯೋಗಿ, ಪಂ ರಾಜ್ ಸೇರಿದಂತೆ ಕಾಮಗಾರಿಗಳನ್ನು ನಿರ್ವಹಿಸುವ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಕಾಮಗಾರಿಗಳನ್ನು ಕೈಗೊಳ್ಳುವವರ ಬಳಿ ಇರುವ ವಾಹನಗಳು ಮತ್ತು ಯಂತ್ರೋಪಕರಣಗಳು ಮತ್ತು ಅವರ ಸಂಪರ್ಕ ಸಂಖ್ಯೆ ಕುರಿತ ವಿವರವಾದ ಮಾಹಿತಿಯನ್ನು ಸಂಗ್ರಹಿಸಿಡಬೇಕು. ಅದರ ಪ್ರತಿಯನ್ನು ಜಿಲ್ಲಾ ಕಂಟ್ರೋಲ್ ರೂಂ ಗೆ ನೀಡಿ, ತುರ್ತು ಸಂದರ್ಭದಲ್ಲಿ ಈ ಎಲ್ಲಾ ರಕ್ಷಣಾ ಸಂಪನ್ಮೂಲಗಳು ನೆರವಿಗೆ ದೊರೆಯುವಂತೆ ನೋಡಿಕೊಳ್ಳಬೇಕು’ ಎಂದರು.
`ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರವಹಿಸಬೇಕು, ಅಗತ್ಯ ಔಷಧಗಳ ಕೊರತೆಯಾಗಬಾರದು. ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಸಿಬ್ಬಂದಿಗಳು ಲಭ್ಯವಿರಬೇಕು. ವೈದ್ಯಕೀಯ ಉಪಕರಣಗಳು ಹಾಗೂ ಆಂಬುಲೆನ್ಸ್ಗಳು ಸುಸ್ಥಿತಿಯಲ್ಲಿರುವಂತೆ ಎಚ್ಚರವಹಿಸಬೇಕು’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

`ಕಂದಾಯ ಇಲಾಖೆ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿರುವ ಕಚ್ಚಾ ಮನೆಗಳ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಿಟ್ಟುಕೊಳ್ಳಬೇಕು. ಅತಿ ಹೆಚ್ಚು ಮಳೆ ಬೀಳುವ ಮುನ್ಸೂಚನೆ ದೊರೆತ ಕೂಡಲೇ ಅಲ್ಲಿನ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವ ಕುರಿತಂತೆ ನೋಟಿಸ್ ನೀಡಿ, ತಕ್ಷಣ ಅವರನ್ನು ಅಲ್ಲಿಂದ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು. ಅಪಾಯಕಾರಿ ಜಾಹೀರಾತು ಫಲಕಗಳಿದ್ದಲ್ಲಿ ಅವುಗಳನ್ನು ತೆರವುಗಳಿಸಲು ಕ್ರಮ ಕೈಗೊಳ್ಳಿ’ ಎಂದು ನಿರ್ದೇಶನ ನೀಡಿದರು. `ಮಾನ್ಸೂನ್ ಅವಧಿಯಲ್ಲಿ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಕೇಂದ್ರಸ್ಥಾನದಲ್ಲಿರಬೇಕು, ಈ ಅವಧಿಯಲ್ಲಿ ಯಾವುದೇ ರೀತಿಯ ರಜೆಯನ್ನು ಪಡೆಯವಂತಿಲ್ಲ, ತುರ್ತು ಸಂದರ್ಭಗಳಿದ್ದಲ್ಲಿ ರಜೆ ಪಡೆಯುವಾಗ ತಮ್ಮ ಸ್ಥಾನಕ್ಕೆ ಜವಾಬ್ದಾರಿಯುತ ಮತ್ತೊಬ್ಬ ಅಧಿಕಾರಿಯನ್ನು ನಿಯೋಜಿಸಿ ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಬೇಕು. ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯ ಮತ್ತು ಸಹಕಾರದಿಂದ ಒಟ್ಟಾಗಿ ಕಾರ್ಯನಿರ್ವಹಿಸುವುದರ ಮೂಲಕ ಜಿಲ್ಲೆಯಲ್ಲಿ ಮಾನ್ಸೂನ್ ವೇಳೆಯಲ್ಲಿ ಜಿಲ್ಲೆಯ ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಅಗತ್ಯವಿರುವ ನೆರವು ಒದಗಿಸಬೇಕು’ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಉಪ ವಿಭಾಗಾಧಿಕಾರಿ ಕನಿಷ್ಕ, ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಜಿ.ಪಂ. ಉಪ ಕಾರ್ಯದರ್ಶಿ ನಾಗೇಶ್ ರಾಯ್ಕರ್, ಎಲ್ಲಾ ಉಪ ವಿಭಾಗಾಧಿಕಾರಿಗಳು, ತಹಸೀಲ್ದಾರ್‌ಗಳು, ತಾ.ಪಂ.ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Previous Post

ಮೋದಿ ಮೊದಲಿಸಿದ ಪಾಕಿಸ್ತಾನದ ಭಕ್ತ!

Next Post

ಜಾತ್ರೆ ಅವ್ಯವಹಾರ: 11 ಲಕ್ಷ ರೂ ಅವ್ಯವಹಾರದ ಪೆನ್ ಡ್ರೈವ್ ಕಣ್ಮರೆ!

Next Post
Fair scam Pen drive worth Rs 11 lakh goes missing!

ಜಾತ್ರೆ ಅವ್ಯವಹಾರ: 11 ಲಕ್ಷ ರೂ ಅವ್ಯವಹಾರದ ಪೆನ್ ಡ್ರೈವ್ ಕಣ್ಮರೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ