ಉತ್ತರ ಕನ್ನಡ ಜಿಲ್ಲೆಯಲ್ಲಿ ಜೂನ್ 12ರಿಂದ ಮುಂದಿನ ಎರಡು ದಿನಗಳ ಕಾಲ ಭಾರೀ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನಲೆ ಉತ್ತರ ಕನ್ನಡ ಜಿಲ್ಲಾಡಳಿತ ರೆಡ್ ಅಲರ್ಟ ಘೋಷಿಸಿದೆ.
ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಗುಡುಗುಸಹಿತ ಮಳೆಯ ಮಾಹಿತಿ ನೀಡಿದೆ. ಹೀಗಾಗಿ `ಸಾರ್ವಜನಿಕರು ಸಾಕಷ್ಟು ಮುನ್ನಚ್ಚರಿಕೆವಹಿಸಬೇಕು’ ಎಂದು ಜಿಲ್ಲಾಧಿಕಾರಿ ಕೆ ಲಕ್ಷ್ಮಿಪ್ರಿಯ ತಿಳಿಸಿದ್ದಾರೆ. `ಜಿಲ್ಲೆಯ ಕೆಲವು ಕಡೆ ಮೂರು ದಿನ ಭಾರೀ ಪ್ರಮಾಣದ ಗಾಳಿ ಬೀಸುವ ಸಾಧ್ಯತೆಯಿದೆ.
ಈ ಹಿನ್ನಲೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ ತೆರೆಯಲಾಗಿದ್ದು, ಹವಾಮಾನ ಮುನ್ನಚ್ಚರಿಕೆಯನ್ನು ಇಲ್ಲಿಂದ ನೀಡಲಾಗುತ್ತದೆ. `ಮೀನುಗಾರರು ಸಮುದ್ರಕ್ಕೆ ಹೋಗಬಾರದು. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರದ ಕಡೆ ಸಾರ್ವಜನಿಕರು ಹೋಗಬಾರದು. ಮಕ್ಕಳ ಬಗ್ಗೆ ಪ್ರತಿಯೊಬ್ಬರು ಎಚ್ಚರಿಕೆವಹಿಸಬೇಕು’ ಎಂದು ಜಿಲ್ಲಾಡಳಿತ ಮತ್ತೊಮ್ಮೆ ನೆನಪಿಸಿದೆ.
`ಕೃಷಿಕರು ಮಳೆ-ಸಿಡಿಲಿನಂತಹ ಸಂದರ್ಭದಲ್ಲಿ ಕೃಷಿ ಚಟುವಟಿಕೆಯಿಂದ ದೂರವಿರಬೇಕು. ಸಾರ್ವಜನಿಕರು, ಮಕ್ಕಳು, ಕಾರ್ಮಿಕರು ಮಳೆ ಬೀಳುವ ಸಂದರ್ಭದಲ್ಲಿ ಹೊರಗೆ ತಿರುಗಬಾರದು. ಪ್ರತಿಯೊಬ್ಬರು ಸೂಕ್ತ ಕಟ್ಟಡದಲ್ಲಿ ಆಶ್ರಯಪಡೆಯಬೇಕು. ಅಪಾಯದ ಸ್ಥಳದಿಂದ ದೂರವಿರಬೇಕು’ ಎಂದು ಜಿಲ್ಲಾಡಳಿತ ಹೇಳಿದೆ.
`ಗ್ರಾಮೀಣ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಕಾಲುಸಂಕ, ಕಿರು ಸೇತುವೆ ದಾಡುವಾಗ ಎಚ್ಚರಿಕೆವಹಿಸಬೇಕು. ಶಿಥಿಲಾವಸ್ಥೆಯಿರುವ ಅಥವಾ ಕುಸಿತದ ಹಂತದ ಕಂಪೌAಡ್ ಅಥವಾ ಮನೆಯ ಗೋಡೆ ಕಂಡುಬAದಲ್ಲಿ ತುರ್ತು ಸೇವೆಯ 08382-229857, ವಾಟ್ಸಪ್ ನಂ: 9483511015 ಮಾಹಿತಿ ಕೊಡಬೇಕು’ ಎಂದು ಜಿಲ್ಲಾಡಳಿತ ಸೂಚಿಸಿದೆ.