ಉತ್ತರ ಕನ್ನಡ ಜಿಲ್ಲೆಯಲ್ಲಿ ಜೂನ್ 17ರವರೆಗೆ ರೆಡ್ ಅಲರ್ಟ ಘೋಷಿಸಲಾಗಿದೆ. ಈ ಹಿನ್ನಲೆ ಕರಾವಳಿ ಭಾಗದ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಸದ್ಯದ ಆದೇಶದ ಪ್ರಕಾರ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕು ವ್ಯಾಪ್ತಿಯ ಶಾಲೆಗಳಿಗೆ ಮಾತ್ರ ಈ ಮಳೆ ರಜೆ ಅನ್ವಯವಾಗಲಿದೆ. ಅಂಗನವಾಡಿ ಜೊತೆ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಸಿಕ್ಕಿದೆ.
ಮಲೆನಾಡು ಭಾಗದ ಶಾಲೆಗಳು ಎಂದಿನoತೆ ಕಾರ್ಯ ನಿರ್ವಹಿಸಲಿದೆ. ಜೊತೆಗೆ ಕಾಲೇಜುಗಳಿಗೆ ಈ ರಜೆ ನಿಯಮ ಅನ್ವಯ ಆಗುವುದಿಲ್ಲ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಕಾರವಾರದ ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಸ್ತಾವನೆ ಆಧಾರದಲ್ಲಿ ಜಿಲ್ಲಾಧಿಕಾರಿ ಕೆ ಲಕ್ಷ್ಮಿಪ್ರಿಯಾ ಈ ರಜೆ ಭಾಗ್ಯ ಕರುಣಿಸಿದ್ದಾರೆ. ಜೊತೆಗೆ ಬೇಸಿಗೆ ಅವಧಿಯಲ್ಲಿ ರಜೆಯ ಪಾಠ ಮಾಡುವಂತೆಯೂ ಅವರು ಆದೇಶಿಸಿದ್ದಾರೆ.