ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿ ದಕ್ಷಿಣ ಕನ್ನಡಕ್ಕೆ ವರ್ಗಾವಣೆಯಾಗಿದ್ದ ಮುಲೈ ಮುಹಿಲನ್ ಅವರು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ನೋಂದಣಿ ಮಹಾಪರಿವೀಕ್ಷಕ ಮತ್ತು ಮುದ್ರಾಂಕ ಆಯುಕ್ತರಾಗಿ ನೇಮಕವಾಗಿದ್ದಾರೆ.
ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ಅವರು ಈ ದಿನ ಮುಲೈ ಮುಹಿಲನ್ ಅವರಿಗೆ ಫೋನ್ ಮಾಡಿ, ಅವರ ಸೇವೆ ಸ್ಮರಿಸಿದರು. ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ ಸಂಬoಧಿಸಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಕಷ್ಟು ಸಮಸ್ಯೆಯಿದ್ದು, ಅದನ್ನು ಪರಿಹರಿಸುವಂತೆ ಮನವಿ ಮಾಡಿದರು.
‘ಮುಲ್ಲೈ ಅವರಿಗೆ ಉತ್ತರಕನ್ನಡ ಜಿಲ್ಲೆಯ ಬಗೆಗೆ ಸಂಪೂರ್ಣ ಮಾಹಿತಿ ಇದೆ. ಹೀಗಾಗಿ ಇಲ್ಲಿನ ಸಮಸ್ಯೆಗಳಿಗೆ ಅವರ ಅಧಿಕಾರವಾದಿಯಲ್ಲಿ ಪರಿಹಾರಗಳು ಸಿಗುವ ಭರವಸೆ ಮೂಡಿದೆ’ ಎಂದು ಮಾಧವ ನಾಯಕ ಅವರು ಪ್ರತಿಕ್ರಿಯಿಸಿದ್ದಾರೆ.