6
  • Latest
Uttara Kannada Keni Port Construction A new chapter of development begins here!

ಉತ್ತರ ಕನ್ನಡ | ಕೇಣಿ ಬಂದರು ನಿರ್ಮಾಣ: ಅಭಿವೃದ್ಧಿಯ ಹೊಸ ಅಧ್ಯಾಯ ಇಲ್ಲಿಂದ ಶುರು

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಉತ್ತರ ಕನ್ನಡ | ಕೇಣಿ ಬಂದರು ನಿರ್ಮಾಣ: ಅಭಿವೃದ್ಧಿಯ ಹೊಸ ಅಧ್ಯಾಯ ಇಲ್ಲಿಂದ ಶುರು

ಕೌಶಲ್ಯ ತರಬೇತಿ.. ಉದ್ಯೋಗ ಸೃಷ್ಠಿ.. ಜನ-ಜೀವನ ಸುಧಾರಣೆ.. ಬಂದರು ನಿರ್ಮಾಣದಿಂದ ಎಲ್ಲವೂ ಸಾಧ್ಯ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
Uttara Kannada Keni Port Construction A new chapter of development begins here!

ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ಕೇಣಿಯಲ್ಲಿ ಸರ್ವಋತು ಆಳ ಸಮುದ್ರ ಗ್ರೀನ್‌ಫೀಲ್ಡ್ ಬಂದರಿನ ಅಭಿವೃದ್ಧಿ

ADVERTISEMENT

ಸಾರ್ವಜನಿಕರ ಮಾಹಿತಿಗಾಗಿ

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕೇಣಿಯಲ್ಲಿ ಗ್ರೀನ್ಫೀಲ್ಡ್ ಸರ್ವಋತು ಬಂದರು ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಸದರಿ ಬಂದರನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಡಿಯಲ್ಲಿ ಅಭಿವೃದ್ಧಿಪಡಿಸಲು ಕರ್ನಾಟಕ ಜಲಸಾರಿಗೆ ಮಂಡಳಿಯು ರಾಷ್ಟ್ರದ ಪ್ರತಿಷ್ಠಿತ ಬಂದರು ಉದ್ದಿಮೆದಾರರಾದ JSW ಕಂಪನಿಯೊoದಿಗೆ ಒಪ್ಪಂದವನ್ನು ಮಾಡಿಕೊಂಡಿದೆ.

Advertisement. Scroll to continue reading.

ಯೋಜನೆಯ ಸಂಬ0ಧಿತ ಅಧ್ಯಯನಗಳನ್ನು ನಡೆಸಲಾಗಿದ್ದು, ಯೋಜನೆಯು ಕಾರ್ಯಸಾಧ್ಯವೆಂದು ಕಂಡುಬAದಿದೆ. ಯೋಜನೆಯನ್ನು ಮತ್ತಷ್ಟು ಮುಂದಕ್ಕೆ ಕೊಂಡೊಯ್ಯಲು, ಜಿಲ್ಲಾಧಿಕಾರಿಗಳು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳ ಜೊತೆಗೆ ಸಾರ್ವಜನಿಕರು, ಜನಪ್ರತಿನಿಧಿಗಳು ಮತ್ತು ಯೋಜನೆಯಲ್ಲಿ ಹಿತಾಸಕ್ತಿ ಹೊಂದಿರುವವರ ಸಮ್ಮುಖದಲ್ಲಿ ಯೋಜನೆಯ ಬಗ್ಗೆ ಅಭಿಪ್ರಾಯ ಮತ್ತು ಸಲಹೆಗಳನ್ನು ಪಡೆಯಲು ಸಾರ್ವಜನಿಕ ಅಹವಾಲು ಸಭೆಯನ್ನು ನಡೆಸಲಾಗುವುದು. ಈ ಸಾರ್ವಜನಿಕ ಅಹವಾಲು ಸಭೆಯಲ್ಲಿ ಸ್ಥಳೀಯರು ಭಾಗವಹಿಸಿ, ಸಾಮಾಜಿಕ-ಪರಿಸರ ಸಮಸ್ಯೆಗಳು ಮತ್ತು ಅದರ ಪರಿಹಾರ ಕ್ರಮಗಳ ಬಗ್ಗೆ ಚರ್ಚಿಸಲು ಅವಕಾಶವನ್ನು ನೀಡುತ್ತದೆ.

Advertisement. Scroll to continue reading.

ಈ ಬಂದರು ಯೋಜನೆಯಿಂದ ಉತ್ತರ ಕನ್ನಡ, ಕರಾವಳಿ ಕರ್ನಾಟಕ, ಉತ್ತರ ಮತ್ತು ದಕ್ಷಿಣ ಕರ್ನಾಟಕದ ಹಿನ್ನಾಡಿನ ಪ್ರದೇಶಗಳ ಕೈಗಾರಿಕೆಗಳ ಅಗತ್ಯ ಸರಕುಗಳು, ಕೃಷಿ, ಮೀನುಗಾರಿಕಾ ಉತ್ಪನ್ನಗಳು ಹಾಗೂ ಇನ್ನಿತರ ಸರಕು ಸಾಗಾಣಿಕೆಗೆ ಸಹಾಯವಾಗುತ್ತದೆ. ಉತ್ಪಾದನೆ ಮತ್ತು ಕೈಗಾರಿಕಾ ಕ್ಷೇತ್ರಗಳಲ್ಲಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಹೂಡಿಕೆದಾರರನ್ನು ಆಕರ್ಷಿಸುತ್ತದೆ. ಬಂದರನ್ನು ಸಂಪರ್ಕಿಸುವ ರಸ್ತೆಗಳು ರಾಷ್ಟ್ರೀಯ ಹೆದ್ದಾರಿಗಳೊಂದಿಗೆ ಉತ್ತಮವಾಗಿ ಸಂಯೋಜಿಸಲ್ಪಡುತ್ತವೆ, ಇದು ಸ್ಥಳೀಯ ನಿವಾಸಿಗಳಿಗೂ ಪ್ರಯೋಜನಕಾರಿಯಾಗಲಿದೆ.

ಈ ಕೇಣಿ ಬಂದರು ನಿರ್ಮಾಣದಿಂದ ಜನರ ಬಹುಕಾಲದ ಬೇಡಿಕೆಗಳಲ್ಲೊಂದಾದ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಸಾಧ್ಯತೆಗೊಳಲು ಸಹಕಾರಿಯಾಗಲಿದೆ. ಇದರ ಜೊತೆಗೆ ಈ ಯೋಜನೆಯು ಅಂಕೋಲಾ ತಾಲ್ಲೂಕು ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾರ್ವಜನಿಕ ಸಂಪರ್ಕದ ಉತ್ತೇಜನ, ಕೈಗಾರಿಕಾ, ಆರ್ಥಿಕ, ವಾಣಿಜ್ಯಾತ್ಮಕ ಅಭಿವೃದ್ಧಿಯಾಗುವುದರೊಂದಿಗೆ ವಿವಿಧ ಅವಕಾಶಗಳ ಮೂಲಕ ಜೀವನಮಟ್ಟವನ್ನು ಉನ್ನತಗೊಳಿಸುವ ಮಾರ್ಗವನ್ನು ಒದಗಿಸಲಿದೆ.

ಜೆಎಸ್ಡಬ್ಲ್ಯೂ ಕಂಪನಿಯು ಕೇಣಿ, ಬಾವಿಕೆರೆ, ಅಂಕೋಲಾ, ಅಲಗೇರಿ, ಶಿರಕುಳಿ, ಬೊಗ್ರಿಬೈಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೀನುಗಾರರು ಮತ್ತು ಸ್ಥಳೀಯ ಸಮುದಾಯಗಳ ಸರ್ವೋತೋಮುಖ ಅಭಿವೃದಿಗಾಗಿ ತನ್ನ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (CSR) ಅಡಿಯಲ್ಲಿ ಶೈಕ್ಷಣಿಕ, ಸಮುದಾಯ ಆರೋಗ್ಯ, ಸ್ಥಳೀಯರು ಹಾಗೂ ಮೀನುಗಾರರ ಸಮುದಾಯದವರಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳು, ಕೌಶಲ್ಯ ಅಭಿವೃದ್ಧಿ, ಮಹಿಳೆಯರ ಆರ್ಥಿಕ ಸಬಲೀಕರಣ ಮತ್ತು ಇನ್ನಿತರ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲು ಯೋಜಿಸಿದೆ. ಇದರಿಂದಾಗಿ ಈ ಪ್ರದೇಶದ ಅಭಿವೃದ್ಧಿ ಖಂಡಿತವಾಗಿ ನಿಶ್ಚಿತವಾಗಿದೆ.

ಕೇಣಿ ಬಂದರಿನ ನಿರ್ಮಾಣವು ನಗರೀಕರಣವನ್ನು ಉತ್ತೇಜಿಸುವುದರೊಂದಿಗೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಣಿಜ್ಯ, ಪ್ರವಾಸೋದ್ಯಮ, ಆತಿಥ್ಯ ಮತ್ತು ವಸತಿ ಅಭಿವೃದ್ಧಿ ಚಟುವಟಿಕೆಗಳಿಗೆ ಪೂರಕವಾಗಿರುತ್ತದೆ. ಇದರಿಂದಾಗಿ ಈ ಪ್ರದೇಶದ ಆರ್ಥಿಕ, ವಾಣಿಜ್ಯಾತ್ಮಕ, ಕೈಗಾರಿಕಾ ಅಭಿವೃದ್ಧಿಯೊಂದಿಗೆ ನೇರ ಮತ್ತು ಪರೋಕ್ಷ ಉದ್ಯೋಗಾವಕಾಶಗಳನ್ನು ಕಲ್ಪಿಸಲಾಗುತ್ತದೆ. ಒಟ್ಟಾರೆ ಈ ಯೋಜನೆಯಿಂದ ಅಂಕೋಲಾ ತಾಲೂಕು ಮತ್ತು ಉತ್ತರ ಕನ್ನಡ ಜಿಲ್ಲೆಯ ಜನರ ಜೀವನ ಮಟ್ಟ ಖಂಡಿತವಾಗಿಯೂ ಸುಧಾರಿಸುತ್ತದೆ.

ಈ ಯೋಜನೆಯು ಕಾರ್ಯಗತಗೊಳ್ಳುವುದರಿಂದ ಸ್ಥಳೀಯರಿಗೆ ಅವರ ಶೈಕ್ಷಣಿಕ ಅರ್ಹತೆಗಳ ಆಧಾರದ ಮೇಲೆ ಹಲವಾರು ನೇರ ಮತ್ತು ಪರೋಕ್ಷ ಉದ್ಯೋಗಾವಕಾಶಗಳು ಒದಗುತ್ತವೆ ಮತ್ತು ಸಾಕಷ್ಟು ವ್ಯಾಪಾರ ಅವಕಾಶಗಳು ಸೃಷ್ಟಿಯಾಗುತ್ತವೆ. ಈ ಯೋಜನೆಯು ಉತ್ತರ ಕನ್ನಡ ಜಿಲ್ಲೆಯ ಸರ್ವೋತೋಮುಖ ಅಭಿವೃದ್ಧಿಗೆ (ಗೇಮ್ ಚೇಂಜರ್) ಪೂರಕವಾಗಲಿದೆ ಎಂದು ನಾವು ನಿಮಗೆ ಭರವಸೆ ನೀಡುತ್ತೇವೆ.

ಯೋಜನೆಯ ಕುರಿತು ಹೆಚ್ಚಿನ ಮಾಹಿತಿಗಾಗಿ ಕಂಪನಿಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ರೇಶ್ಮಾ ಉಳ್ಳಾಲ್ ಅವರನ್ನು ಮೊಬೈಲ್ ಸಂಖ್ಯೆ: 7411061555, reshma.ullal@jsw.in ನಲ್ಲಿ ಸಂಪರ್ಕಿಸಬಹುದು. ಈ ಯೋಜನೆಯ ವಿಸ್ತೃತ ಮಾಹಿತಿಗಳನ್ನು ಈ ಕೆಳಗಿನ ಸಾಮಾಜಿಕ ಜಾಲತಾಣಗಳಲ್ಲಿ (Social Media) ನೋಡಬಹುದು

ಯೋಜನಾ ಮುಖ್ಯಸ್ಥರು
JSW ಕೇಣಿ ಪೋರ್ಟ್ ಪ್ರೈವೇಟ್ ಲಿಮಿಟೆಡ್

Youtube www.youtube.com/@JSWKeniPortPrivateLimited

facebook: https://www.facebook.com/share/195xiQXxF6/

instagram: https://www.instagram.com/jswkeniport/profilecard/?igsh=MXBnNTl1djR6bmhzbw==

Previous Post

ಗುಜರಾತಿನಲ್ಲಿ ಸೆರೆಸಿಕ್ಕ ಆರೋಪಿ

Next Post

ಅಣಲಗಾರಿನಲ್ಲಿ ಯಕ್ಷಗಾನ ಪ್ರದರ್ಶನ ನಾಳೆ

Next Post
ಅಣಲಗಾರಿನಲ್ಲಿ ಯಕ್ಷಗಾನ ಪ್ರದರ್ಶನ ನಾಳೆ

ಅಣಲಗಾರಿನಲ್ಲಿ ಯಕ್ಷಗಾನ ಪ್ರದರ್ಶನ ನಾಳೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ