ಯಲ್ಲಾಪುರ: ತಾಲೂಕಿನ ಚಂದಗುಳಿಯ ಘಂಟೆ ಗಣಪತಿ ದೇವಸ್ಥಾನದ ಗುರು ಭವನದಲ್ಲಿ ತುರುವೆಕೆರೆಯ ಶ್ರೀ ಪ್ರಣವಾನಂದ ಸ್ವಾಮಿಗಳು ಚಾತುರ್ಮಾಸ್ಯ ವ್ರತದ ಸಂಕಲ್ಪ ಕೈಗೊಂಡರು.
ಘಂಟೆ ಗಣಪತಿಯ ಸನ್ನಿಧಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಚಾತುರ್ಮಾಸ್ಯ ವ್ರತವನ್ನು ಶ್ರೀಗಳು ಆರಂಭಿಸಿದರು.
ಗುರು ಪೂರ್ಣಿಮೆಯ ಪ್ರಯುಕ್ತ ವೈದಿಕರಿಂದ ರುದ್ರ ಪಾರಾಯಣ, ಮಾತೆಯರಿಂದ ಲಲಿತಾ ಸಹಸ್ರನಾಮ ಪಠಣ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.