ಶಿರಸಿ: ತಾಲೂಕಿನ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ಯತಿದ್ವಯರಿಂದ ಚಾತುರ್ಮಾಸ್ಯ ವ್ರತ ಸಂಕಲ್ಪ ಗುರುಪೂರ್ಣಿಮೆಯ ಶುಭ ಸಂದರ್ಭದಲ್ಲಿ ನಡೆಯಿತು.
ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮಿಗಳು 35 ನೇ ಚಾತುರ್ಮಾಸ್ಯ ಹಾಗೂ ಶ್ರೀ ಆನಂದ ಬೋಧೇಂದ್ರ ಸರಸ್ವತೀ ಸ್ವಾಮಿಗಳು ಎರಡನೇ ಚಾತುರ್ಮಾಸ್ಯ ವ್ರತದ ಸಂಕಲ್ಪವನ್ನು ವ್ಯಾಸಪೂಜೆಯೊಂದಿಗೆ ಮಾಡಿದರು.
ಇದೇ ಸಂದರ್ಭದಲ್ಲಿ ಶಿಷ್ಯವ್ರಂದದವರಿಂದ ಯತಿದ್ವಯರ ಪಾದುಕಾಪೂಜೆ ನೆರವೇರಿಸಲಾಯಿತು.