ಆಡಳಿತದಲ್ಲಿ ಪಾರದರ್ಶಕತೆ, ಸರಳತೆ ಹಾಗೂ ಸಕಾಲದಲ್ಲಿ ನಾಗರಿಕ ಸೇವೆ ನೀಡುವ ಬಗ್ಗೆ 39 ಇಲಾಖೆಗಳಿಗೆ ಸಂಬoಧಿಸಿ 7 ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ನೀಡಿರುವುದಾಗಿ ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಹೇಳಿದ್ದಾರೆ. ಈ ವರದಿಯಲ್ಲಿ ಒಟ್ಟು 5039 ಶಿಫಾರಸ್ಸುಗಳನ್ನು ಮಾಡಲಾಗಿದೆ ಎಂದವರು ತಿಳಿಸಿದರು.
`ಮೇ 2024ರಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ಮತ್ತು ಸರ್ಕಾರದ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸಭೆ ನಡೆಸಿ ಪ್ರಗತಿ ಪರಿಶೀಲನಾ ಸಭೆಗಳಲ್ಲಿ ಆಡಳಿತ ಸುಧಾರಣಾ ಆಯೋಗದ ಶಿಫಾರಸ್ಸುಗಳ ಅನುಷ್ಠಾನದ ಬಗ್ಗೆ ಮಾಸಿಕ ಸಭೆಗಳಲ್ಲಿಯೂ ಸಹ ಪರಿಶೀಲಿಸಲು ತಿಳಿಸಲಾಗಿತ್ತು. ಇದರ ಪರಿಣಾಮವಾಗಿ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸುವಲ್ಲಿ ಗಣನೀಯ ಪ್ರಗತಿಯಾಗಿದೆ’ ಎಂದರು. ಈ ವೇಳೆ ಅರಣ್ಯ, ಸಾರಿಗೆ, ಗ್ರಾಮೀಣಾಭಿವದ್ದಿ ಮತ್ತು ಪಂಚಾಯತ್ ರಾಜ್, ಗಣಿ ಮತ್ತು ಭೂ ವಿಜ್ಞಾನ, ಲೋಕೋಪಯೋಗಿ, ನಿರ್ಮಿತಿ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಆಭಿವೃದ್ದಿ ಇಲಾಖೆ, ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ಕೈಗಾರಿಕೆ, ಪ್ರವಾಸೋದ್ಯಮ, ಹೆಸ್ಕಾಂ, ನಗರ ಸ್ಥಳೀಯ ಸಂಸ್ಥೆಗಳು, ಹಿಂದುಳಿದ ವರ್ಗಗಳ ಇಲಾಖೆ, ಅಲ್ಪ ಸಂಖ್ಯಾತರ ಇಲಾಖೆ ಸೇರಿದಂತೆ ಪ್ರಮುಖ ಇಲಾಖೆಗಳ ಅಧಿಕಾರಿಗಳಿಂದ ಮತ್ತು ಸಾರ್ವಜನಿಕರಿಂದ ಸಲಹೆಗಳನ್ನು ಅವರು ಸ್ವೀಕರಿಸಿದರು.
Discussion about this post