ಯಲ್ಲಾಪುರ: ಕನ್ನಡ ಸಂಸ್ಕೃತಿ ಇಲಾಖೆ ಕಾರವಾರ ಹಾಗೂ ತೇಲಂಗಾರದ ಮೈತ್ರಿ ಕಲಾ ಬಳಗಗಳ ಆಶ್ರಯದಲ್ಲಿ ತಾಲೂಕಿನ ವಜ್ರಳ್ಳಿಯ ಸರ್ವೋದಯ ಪ್ರೌಢಶಾಲೆಯ ಆವರಣದಲ್ಲಿ ಜುಲೈ 12 ರಂದು ಚಿಗುರು ಕಾರ್ಯಕ್ರಮ ನಡೆಯಲಿದೆ.
ಬೆಳಗ್ಗೆ 10 ಕ್ಕೆ ಶಾಸಕ ಶಿವರಾಮ ಹೆಬ್ಬಾರ ಅಧ್ಯಕ್ಷತೆ ವಹಿಸಲಿದ್ದು ಕಾರ್ಯಕ್ರಮದಲ್ಲಿ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಅಧಿಕಾರಿಗಳು , ಸಾಮಾಜಿಕ ಮುಖಂಡರು ಭಾಗವಹಿಸಲಿದ್ದಾರೆ.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಕ್ಕಳ ಹಿಂದುಸ್ತಾನಿ ಸಂಗೀತ, ಜಾನಪದ ನೃತ್ಯ, ಸುಗಮ ಸಂಗೀತ, ನೃತ್ಯ ರೂಪಕ, ನಾಟಕ, ಏಕಪಾತ್ರಾಭಿನಯ ಕಾರ್ಯಕ್ರಮಗಳು ನಡೆಯಲಿವೆ ಎಂದು ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಲಾ ವೆಂ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.