ಯಲ್ಲಾಪುರ: ಪಟ್ಟಣದ ಶಾರದಾಗಲ್ಲಿಯಲ್ಲಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ.
ಶಾರದಾಗಲ್ಲಿಯ ರೋಹನ ರಾಜು ನೇತ್ರೇಕರ್ (27) ಮೃತ ಯುವಕ. ಈತ ಮನೆಯಲ್ಲೇ ನೇಣು ಹಾಕಿಕೊಂಡು ಮೃತಪಟ್ಟಿದ್ದಾನೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.