ಸಿದ್ದಾಪುರ: ತಾಲೂಕಿನ ಶ್ರೀಮನ್ನೆಲೆಮಾವಿನ ಮಠದಲ್ಲಿ ಶ್ರೀ ಶ್ರೀ ಮಾಧವಾನಂದ ಭಾರತೀ ಮಹಾಸ್ವಾಮಿಗಳ ಚಾತುರ್ಮಾಸ್ಯ ವ್ರತದ ಪ್ರಯುಕ್ತ ಶ್ರೀ ಲಕ್ಷ್ಮೀ ನರಸಿಂಹ ಸಂಸ್ಕೃತಿ ಸಂಪದ ವೇದಿಕೆಯ ಅಡಿಯಲ್ಲಿ ಭಕ್ತಿ- ಭಾವದ ಭಜನಾ ಕಾರ್ಯಕ್ರಮ ನಡೆಯಿತು.
ಶ್ರೀ ಓಂಕಾರ ಭಜನಾ ಮಂಡಳಿ ತಟ್ಟಿಕೈ ಹಾಗೂ ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ನೆಲೆಮಾವು ತಂಡದ ಮಾತೆಯರು ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು.
ಚಾತುರ್ಮಾಸ್ಯದಲ್ಲಿ ಪ್ರತಿ ಶನಿವಾರ ಸೀಮೆಯ ಅನೇಕ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮಗಳು ಹಾಗೂ ನಾಡಿನ ಅನೇಕ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.