ಯಲ್ಲಾಪುರದ ಬಸ್ ನಿಲ್ದಾಣದಲ್ಲಿ ಗ್ಯಾರಂಟಿ ಯೋಜನೆಯ ಸ್ಪಂದನಾ ಕಾರ್ಯಕ್ರಮ ನಡೆಯಿತು.
ಬಸ್ ಗೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಶಿವರಾಮ ಹೆಬ್ಬಾರ, ಸರ್ಕಾರದ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿವೆ. ಸರ್ಕಾರದಿಂದ ಲಾಭ ಪಡೆದ ಜನರು ಕೃತಜ್ಞತಾ ಭಾವ ಹೊಂದಿದರೆ ಸರ್ಕಾರದ ಶ್ರಮ ಸಾರ್ಥಕ. ಯಲ್ಲಾಪುರ ಘಟಕವೊಂದರಲ್ಲೇ ಕಳೆದ ಎರಡು ವರ್ಷಗಳಲ್ಲಿ 43 ಕೋಟಿ ರೂ ವೆಚ್ಚದ ಪ್ರಯಾಣವನ್ನು ಮಹಿಳೆಯರು ಉಚಿತವಾಗಿ ಮಾಡಿದ್ದಾರೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಉಲ್ಲಾಸ ಶಾನಭಾಗ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ಯಾರಂಟಿ ಯೋಜನೆಗಳನ್ನು ತಾಲೂಕಿನಲ್ಲಿ ಶೇ 98 ರಷ್ಟು ಜನರಿಗೆ ತಲುಪಿಸಲಾಗಿದೆ ಎಂದರು.
ಗ್ಯಾರಂಟಿ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಡಿ ಎನ್ ಗಾಂವ್ಕಾರ, ಘಟಕ ವ್ಯವಸ್ಥಾಪಕ ಸಂತೋಷ ವೆರ್ಣೆಕರ, ಪಪಂ ಅಧ್ಯಕ್ಷೆ ನರ್ಮದಾ ನಾಯ್ಕ, ಜಿಪಂ ಮಾಜಿ ಸದಸ್ಯ
ವಿಜಯ ಮಿರಾಶಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ ಎಸ್ ಭಟ್ಟ ಉಪಳೇಶ್ವರ, ತಾ.ಪಂ ಮಾಜಿ ಉಪಾಧ್ಯಕ್ಷೆ ಸುಜಾತಾ ಸಿದ್ದಿ, ಮಹಿಳಾ ಕಾಂಗ್ರೆಸ್ ತಾಲೂಕು ಅಧ್ಯಕ್ಷೆ ಪೂಜಾ ನೇತ್ರೇಕರ, ಗ್ಯಾರಂಟಿ ಸಮಿತಿಯ ಸದಸ್ಯರಾದ ಟಿ ಸಿ ಗಾಂವ್ಕಾರ, ಶಿವಾನಂದ ನಾಯ್ಕ, ಅನಿಲ್ ಮರಾಠೆ, ಮುಶರತ್ ಶೇಖ್ ಇತರರು ಭಾಗವಹಿಸಿದ್ದರು.
ಇದೇ ವೇಳೆ ಚಾಲಕ ನಿರ್ವಾಹಕರನ್ನು ಗೌರವಿಸಲಾಯಿತು. ಗ್ಯಾರಂಟಿ ಸದಸ್ಯರಾದ ಮಹೇಶ ನಾಯ್ಕ, ಎಂ ಕೆ ಭಟ್ಟ ಯಡಳ್ಳಿ ನಿರ್ವಹಿಸಿದರು.