ಯಲ್ಲಾಪುರ: ತಾಲೂಕಿನ ಇಡಗುಂದಿ ಬಳಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಗಟಾರದಲ್ಲಿ ಪಲ್ಟಿಯಾಗಿದೆ.
ಅಂಕೋಲಾ ಕಡೆಯಿಂದ ಹುಬ್ಬಳ್ಳಿ ಕಡೆಗೆ ಸರಕು ತುಂಬಿ ಹೊರಟಿದ್ದ ಲಾರಿ ಇಡಗುಂದಿ ಶಾಲೆಯ ಬಳಿ ನಿಯಂತ್ರಣ ತಪ್ಪಿ ಹೆದ್ದಾರಿ ಗಟಾರದಲ್ಲಿ ಬಿದ್ದಿದೆ.
ಘಟನೆಯಲ್ಲಿ ಲಾರಿ ಜಖಂಗೊಂಡಿದೆ. ಚಾಲಕ ಹಾಗೂ ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.