ಹಳಿಯಾಳ: ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಹಳಿಯಾಳ ಹಾಗೂ ದಾಂಡೇಲಿ ತಾಲೂಕುಗಳ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಶಾಸಕ ಆರ್.ವಿ.ದೇಶಪಾಂಡೆ ಸಮಾಲೋಚನಾ ಸಭೆ ನಡೆಸಿದರು.
ಹಳಿಯಾಳ ಹಾಗೂ ದಾಂಡೇಲಿ ತಾಲೂಕುಗಳಲ್ಲಿ ಮಳೆಯಿಂದ ಉಂಟಾದ ಹಾನಿ ಕುರಿತು ತಾಲೂಕು ಆಡಳಿತ, ನೀರಾವರಿ, ಕೃಷಿ, ವಿದ್ಯುತ್ ಮತ್ತು ಇತರ ಇಲಾಖೆಗಳ ಅಧಿಕಾರಿಗಳಿಂದ ಶಾಸಕರು ಮಾಹಿತಿ ಪಡೆದರು.
ಮಳೆಯಿಂದ ಮನೆಗಳು, ರಸ್ತೆ ಹಾಗೂ ಕೃಷಿ ಬೆಳೆಗಳಿಗೆ ಉಂಟಾದ ನಷ್ಟದ ಕುರಿತು ವಿವರಗಳನ್ನು ಪಡೆದು ತಕ್ಷಣದ ಪರಿಹಾರ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.