ಯಲ್ಲಾಪುರ: ಕಳೆದ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕನ್ನಡ ಭಾಷಾ ವಿಷಯದಲ್ಲಿ ಶೇ.100 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ಪಟ್ಟಣದ ಟಿ ಎಂಎಸ್ ಸಭಾಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲೆ ಹಾಗೂ ತಾಲೂಕಾ ಘಟಕಗಳ ಆಶ್ರಯದಲ್ಲಿ ಜು 19 ರಂದು ಬೆಳಗ್ಗೆ 10.30 ಕ್ಕೆ ನಡೆಯಲಿದೆ.
ಶಾಸಕ ಶಿವರಾಮ ಹೆಬ್ಬಾರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಸಾಪ ಜಿಲ್ಲಾಧ್ಯಕ್ಷ ಬಿ ಎನ್ ವಾಸರೆ ಅಧ್ಯಕ್ಷತೆ ವಹಿಸಲಿದ್ದಾರೆ. ಕಸಾಪ ತಾಲೂಕು ಅಧ್ಯಕ್ಷ ಸುಬ್ರಹ್ಮಣ್ಯ ಭಟ್ಟ, ಪಪಂ ಅಧ್ಯಕ್ಷೆ ನರ್ಮದಾ ನಾಯ್ಕ, ಟಿಎಂ ಎಸ್ ಅಧ್ಯಕ್ಷ ಎನ್ ಕೆ ಭಟ್ಟ, ತಹಸೀಲ್ದಾರ ಚಂದ್ರಶೇಖರ ಹೊಸ್ಮನಿ, ಬಿಇಒ ಎನ್ ಆರ್ ಹೆಗಡೆ, ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅಜಯ ನಾಯಕ, ತಾಲೂಕು ಅಧ್ಯಕ್ಷ ಚಂದ್ರಶೇಖರ, ಪತ್ರಕರ್ತ ಶಂಕರ ಭಟ್ಟ ತಾರೀಮಕ್ಕಿ ಭಾಗವಹಿಸಲಿದ್ದಾರೆ.