ಯಲ್ಲಾಪುರ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನಿಷ್ಠಾವಂತ ಸ್ವಯಂ ಸೇವಕರಾಗಿ, ಆದರ್ಶಯುತವಾಗಿ ಬದುಕಿದ್ದ ದಿ. ಸತೀಶ ಕಟ್ಟಿಗೆ ಅವರ ಮೂರನೇ ವರ್ಷದ ಪುಣ್ಯಸ್ಮರಣೆಯ ಪ್ರಯುಕ್ತ ಜುಲೈ 22 ರಂದು ಪಟ್ಟಣದ ಅಡಿಕೆ ಭವನದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆರ್.ಎಸ್.ಎಸ್ ನಿಂದ ಆಯೋಜಿಸಲಾಗಿದೆ.
ಹುಬ್ಬಳ್ಳಿಯ ಶಾ ದಾಮಜಿ ಜಾದವಜಿ ಛೇಡಾ ಸ್ಮಾರಕ ರಾಷ್ಟ್ರೋತ್ಥಾನ ರಕ್ತ ಕೇಂದ್ರದ ಸಹಯೋಗದೊಂದಿಗೆ ಈ ಶಿಬಿರ ನಡೆಯಲಿದೆ. ಬೆಳಗ್ಗೆ 10 ರಿಂದ ಸಂಜೆ 4.30 ರವರೆಗೆ ಶಿಬಿರ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ರಕ್ತ ದಾನಿಗಳು ಭಾಗವಹಿಸಿ ಶಿಬಿರವನ್ನು ಯಶಸ್ವಿಗೊಳಿಸುವಂತೆ ಆಯೋಜಕರು ವಿನಂತಿಸಿದ್ದಾರೆ.