ಭಟ್ಕಳ ತಾಲೂಕಿನ ಶಿರಾಲಿಯ ಗುಡಿಹಿತ್ತಲಿನ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಶಿರಾಲಿ ಗುಡಿಹಿತ್ಲು ನಿವಾಸಿ ದೇವರಾಜ ಈಶ್ವರ ನಾಯ್ಕ (20) ಬಂಧಿತ ಯುವಕ. ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದಾಗ ಇವನನ್ನು ಭಟ್ಕಳ ಗ್ರಾಮೀಣ ಠಾಣಾ ಪೊಲೀಸರು ಬಂಧಿಸಿದ್ದಾರೆ. ನಂತರ ವೈದ್ಯಕೀಯ ಪರೀಕ್ಷೆಗೊಳಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.




