ಯಲ್ಲಾಪುರ: ತಾಲೂಕಿನ ಆನಗೋಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕ್ರಿಯಾಶೀಲ ಶಿಕ್ಷಕ ಮಾರುತಿ ಆಚಾರಿ ಇವರಿಗೆ ಚೇತನ ಫೌಂಡೇಶನ್ ನೀಡುವ ನಾಡಪ್ರಭು ಕೆಂಪೇಗೌಡ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.
ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಶಿಕ್ಷಣ, ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನದಲ್ಲಿ ಈ ಪ್ರಶಸ್ತಿಯನ್ನು ಮಾರುತಿ ಅವರಿಗೆ ನೀಡಿ ಗೌರವಿಸಲಾಯಿತು.
ಚೇತನ ಮೀಡಿಯಾ, ಇವೆಂಟ್ ಆ್ಯಂಡ್ ಪಬ್ಲಿಸಿಟಿ ಪಾರ್ಟನರ್ ಹಾಗೂ ಚೇತನ ಫೌಂಡೇಷನ್ ನಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಿಕ್ಷಣ, ಸಾಹಿತ್ಯ, ನಾಡು-ನುಡಿ, ವೈದ್ಯಕೀಯ, ಸಮಾಜಸೇವೆ ಮುಂತಾದ ಕ್ಷೇತ್ರಗಳ 25 ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.





