ಯಲ್ಲಾಪುರ ತಾಲೂಕು ಸರ್ಕಾರಿ ನೌಕರರ ಸಂಘದ ವಾರ್ಷಿಕ ಸರ್ವಸಾಧಾರಣ ಸಭೆ ಜು.25 ರಂದು ಸಂಜೆ 5 ಕ್ಕೆ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ನಡೆಯಲಿದೆ.
ಕಳೆದ ವರ್ಷದ ಆಯವ್ಯಯ ಮಂಡನೆ ಹಾಗೂ ಮುಂದಿನ ಕಾರ್ಯಯೋಜನೆಗಳ ಬಗ್ಗೆ ಚರ್ಚೆ ನಡೆಯಲಿದೆ.
3.26 ಕೋಟಿ ವೆಚ್ಚದಲ್ಲಿ ಅಂಗಡಿ ಸಂಕೀರ್ಣ, ಸಮುದಾಯ ಭವನವನ್ನು ಒಳಗೊಂಡ ಕಟ್ಟಡ ನಿರ್ಮಾಣಕ್ಕೆ ನೀಲ ನಕ್ಷೆ ಸಿದ್ಧಪಡಿಸಲಾಗಿದೆ.
ಸಂಘದಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನೂ ಸದ್ಯದಲ್ಲೇ ಆಯೋಜಿಸಲಾಗುವುದು ಎಂದು ಸಂಘದ ಅಧ್ಯಕ್ಷ ಸಂಜೀವಕುಮಾರ ಹೊಸ್ಕೇರಿ ತಿಳಿಸಿದ್ದಾರೆ.
ಯಲ್ಲಾಪುರದಲ್ಲಿ ಸರ್ಕಾರಿ ನೌಕರರ ಸಂಘ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದೆ. ಎಲ್ಲ ಸರ್ಕಾರಿ ನೌಕರರ ಹಿತ ಕಾಯಲು ವಿವಿಧ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಸಂಘ ಇನ್ನಷ್ಟು ಚಟುವಟಿಕೆಗಳನ್ನು ಕೈಗೊಳ್ಳಲು ಎಲ್ಲ ಸದಸ್ಯರ ಸಹಕಾರ ಅಗತ್ಯ ಎಂದರು.





