ಯಲ್ಲಾಪುರ ತಾಲೂಕಿನ ವಜ್ರಳ್ಳಿಯ ಸರ್ವೋದಯ ಪ್ರೌಢಶಾಲೆಯ ವಿದ್ಯಾರ್ಥಿನಿ ವೈಷ್ಣವಿ ವಿ ಕೋಮಾರ ದಾವಣಗೆರೆಯ ಸಾಂಸ್ಕೃತಿಕ ಸಂಸ್ಥೆಯಿಂದ ಸರಸ್ವತೀ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.
ಕಳೆದ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ನೂರಕ್ಕೆ ನೂರು ಫಲಿತಾಂಶ ಪಡೆದಿರುವುದಕ್ಕೆ ಈ ಪುರಸ್ಕಾರ ನೀಡಿ ಗೌರವಿಸಲಾಯಿತು.
ಪುರಸ್ಕಾರ ಪಡೆದ ವೈಷ್ಣವಿ ಅವರನ್ನು ಸರ್ವೋದಯ ಪ್ರೌಢಶಾಲೆಯ ಆಡಳಿತ ಮಂಡಳಿ, ಶಿಕ್ಷಕರು ಅಭಿನಂದಿಸಿದ್ದಾರೆ.