ಓಂಕಾರ ಯೋಗ ಕೇಂದ್ರ ಹಾಗೂ ವಿಶ್ವದರ್ಶನ ಸೇವಾ ಆಶ್ರಯದಲ್ಲಿ ತಾಲೂಕು ಮಟ್ಟದ ರಾಮಾಯಣ, ಮಹಾಭಾರತ ಪರೀಕ್ಷೆ, ಉಪನ್ಯಾಸ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ಯಲ್ಲಾಪುರದ ವಿಶ್ವದರ್ಶನ ಆವಾರದ ಶ್ರೀ ಗಂಗಾಧರೇಂದ್ರ ಸರಸ್ವತೀ ಸಭಾಭವನದಲ್ಲಿ ಜು 26 ರಂದು ಸಂಜೆ 4 ಕ್ಕೆ ನಡೆಯಲಿದೆ.
ಟಿಎಂಎಸ್ ಅಧ್ಯಕ್ಷ ಎನ್.ಕೆ.ಭಟ್ಟ ಅಗ್ಗಾಶಿಕುಂಬ್ರಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ವಿಶ್ವದರ್ಶನ ಶಿಕ್ಷಣ ಸಮೂಹದ ಅಧ್ಯಕ್ಷ ಹರಿಪ್ರಕಾಶ ಕೋಣೆಮನೆ ಅಧ್ಯಕ್ಷತೆ ವಹಿಸಲಿದ್ದಾರೆ.
ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಶಿವಲಿಂಗಯ್ಯ ಅಲ್ಲಯ್ಯನವರಮಠ ಬಹುಮಾನ ವಿತರಿಸಲಿದ್ದಾರೆ. ಅಡಕೆ ವ್ಯವಹಾರಸ್ಥರ ಸಂಘದ ಅಧ್ಯಕ್ಷ ರವಿ ಹೆಗಡೆ, ನಗರ ಸೀಮಾ ಪರಿಷತ್ ಅಧ್ಯಕ್ಷ ಸುಬ್ರಹ್ಮಣ್ಯ ಹೆಗಡೆ ಭಾಗವಹಿಸುವರು.
ಅರ್ಥಧಾರಿ ಎಂ.ಎನ್.ಹೆಗಡೆ ಹಾಗೂ ವಿಶ್ವದರ್ಶನ ಪಿಯು ಕಾಲೇಜಿನ ಪ್ರಾಂಶುಪಾಲ ಡಾ.ಡಿ.ಕೆ.ಗಾಂವ್ಕರ ಉಪನ್ಯಾಸ ನೀಡಲಿದ್ದಾರೆ.
ಇದಕ್ಕೂ ಮುನ್ನ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ರಾಮಾಯಣ ಮತ್ತು ಮಹಾಭಾರತದ ಕುರಿತಾದ ಪರೀಕ್ಷೆ ನಡೆಯಲಿದೆ ಎಂದು ಓಂಕಾರ ಯೋಗ ಕೇಂದ್ರದ ಸುಬ್ರಾಯ ಭಟ್ಟ ಆನೆಜಡ್ಡಿ ತಿಳಿಸಿದ್ದಾರೆ.