ಮಳೆಯ ಅಬ್ಬರದಿಂದ ಯಲ್ಲಾಪುರ ತಾಲೂಕಿನ ಪ್ರಸಿದ್ಧ ಮಾಗೋಡ ಜಲಪಾತ ಮೈತುಂಬಿ ಧುಮ್ಮಿಕ್ಕುತ್ತಿದೆ. ಜಲಪಾತದ ವೈಭವ ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡೇ ಹರಿದು ಬರುತ್ತಿದೆ.
ಕೆಲ ದಿನಗಳಿಂದ ಜೋರಾಗಿ ಸುರಿಯುತ್ತಿರುವ ಮಳೆಯ ನಡುವೆಯೂ ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರ ಉತ್ಸಾಹಕ್ಕೇನೂ ಕೊರತೆಯಾಗಿಲ್ಲ.
ಸದ್ಯ ಸಾತೊಡ್ಡಿ ಜಲಪಾತ ವೀಕ್ಷಣೆಗೆ ನಿರ್ಬಂಧ ಇರುವುದರಿಂದ ಮಾಗೋಡ ಜಲಪಾತಕ್ಕೆ ಬರುವ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಹೆಚ್ಚಿದೆ.