ಬೈಕ್ ನಿಂದ ಬಿದ್ದು ಶಿಕ್ಷಕಿಯೊಬ್ಬರು ಮೃತಪಟ್ಟ ಘಟನೆ ಶಿರಸಿ ತಾಲೂಕಿನ ಅಮ್ಮಿನಳ್ಳಿ ಬಳಿ ನಡೆದಿದೆ.
ಶಿರಸಿಯ ಶ್ರೀನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಸವಿತಾ ಮೃತಪಟ್ಟವರು. ಇವರು ಗಂಡನ ಜೊತೆ ಬೈಕ್ ಮೇಲೆ ಬರುವ ಸಂದರ್ಭದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.
ಶಿರಸಿಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡಕ್ಕೆ ಕರೆದೊಯ್ಯುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ.