ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರವು ಪ್ರಸಕ್ತ ಸಾಲಿನಿಂದ ಕಿಶೋರ ಕನಕ ಕಾವ್ಯ ಸ್ಪರ್ಧೆಯನ್ನು ಏರ್ಪಡಿಸುತ್ತಿದೆ.
ಕನಕದಾಸರ ಕಾವ್ಯಗಳನ್ನು ಮಾತ್ರ ಗಮಕ ವಾಚನಕ್ಕೆ ಪರಿಗಣಿಸಲಾಗುವುದು. 10 ರಿಂದ 15 ವರ್ಷ ವಯೋಮಾನದ ಕಿಶೋರ ಪ್ರತಿಭೆಗಳಿಗೆ ಮಾತ್ರ ಸ್ಪರ್ಧೆಯಲ್ಲಿ ಅವಕಾಶ. ಸ್ಪರ್ಧೆಯಲ್ಲಿ ವಿಜೇತರಾದ ಸ್ಪರ್ಧಿಗಳಿಗೆ ಪ್ರಥಮ ಬಹುಮಾನ ರೂ.20000, ದ್ವೀತಿಯ ರೂ.15000,ತೃತೀಯ ರೂ.10000 ಮತ್ತು ಇಬ್ಬರಿಗೆ ಸಮಾಧಾನಕರ ಬಹುಮಾನ, ತಲಾ ರೂ.5000 ದಂತೆ ನೀಡಲಾತ್ತದೆ.
ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧ್ಯಯನ ಕೇಂದ್ರದ ಜಾಲತಾಣ https://kanakadasarearchcenter.karnataka.gov.in ರಲ್ಲಿ ಅರ್ಜಿಗಳನ್ನು ಡೌನ್‌ಲೋಡ್ ಮಾಡಿಕೊಂಡು ಪೂರ್ಣ ಮಾಹಿತಿಯೊನ್ನೊಳಗೊಂಡ ಅರ್ಜಿಗಳನ್ನು ಭರ್ತಿ ಮಾಡಬೇಕು. ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ, ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಂಗಳೂರು-560056 ಗೆ ಅಥವಾ ಇ-ಮೇಲ್ kanakadasarearchcenter@gmail.com ಮೂಲಕ ಸೆಪ್ಟೆಂಬರ್ 20 ರೊಳಗೆ ತಲುಪುವಂತೆ ಕಳುಹಿಸಿಕೊಡಬೇಕು. ಹೆಚ್ಚಿನ ಮಾಹಿತಿಗಾಗಿ 6364529319 ನ್ನು ಸಂಪರ್ಕಿಸಬಹುದಾಗಿದೆ.