`ಹಿರಿತನ, ಬುದ್ಧಿಮತ್ತೆ, ಚಾರಿತ್ರ‍್ಯ ಪರಿಗಣಿಸುವುದಾದರೆ ಹಲವರು ಉನ್ನತ ಸ್ಥಾನದಲ್ಲಿರುತ್ತಿದ್ದರು. ಈ ಎಲ್ಲ ಅಂಶಗಳ ಪರಿಗಣನೆ ಈಗ ಉಳಿದಿಲ್ಲ’ ಎನ್ನುವ ಮೂಲಕ ಹಳಿಯಾಳ ಶಾಸಕ ಆರ್ ವಿ ದೇಶಪಾಂಡೆ ಸಚಿವ ಸ್ಥಾನ ದೊರೆಯದ ಬಗ್ಗೆ ಪರೋಕ್ಷವಾಗಿ ದೇಶಪಾಂಡೆ ಬೇಸರ ವ್ಯಕ್ತಪಡಿಸಿದರು.
`ಮುಖ್ಯಮಂತ್ರಿಗಳು ಹೊಸ ಹೊಸ ಪ್ರಯೋಗ ಮಾಡುತ್ತಿದ್ದಾರೆ. ದೇಶಪಾಂಡೆ ಸಚಿವನಿದ್ದಾಗ ಏನಾಯಿತು, ಈಗ ಮಂಕಾಳು ವೈದ್ಯ ಇದ್ದಾಗ ಏನಾಗುತ್ತಿದೆ ಎಂದು ಅವರು ನೋಡಬೇಕಲ್ವ?’ ಎಂದು ಆರ್.ವಿ.ದೇಶಪಾಂಡೆ ಪ್ರತಿಕ್ರಿಯಿಸಿದರು. `ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ. ಸಚಿವ ಸ್ಥಾನದ ಕುರಿತಾಗಿ ಮುಖ್ಯಮಂತ್ರಿಗಳ ಬಳಿ ಯಾವುದೇ ಚರ್ಚೆ ಮಾಡಿಲ್ಲ. ಸಚಿವ ಸ್ಥಾನದ ಬಗ್ಗೆ ನಾನೇನೂ ವಿಚಾರ ಮಾಡಿಲ್ಲ, ಈ ಬಗ್ಗೆ ತಲೆನೂ ಕೆಡಿಸಿಕೊಂಡಿಲ್ಲ. ಅನಗತ್ಯ ಚರ್ಚೆಯನ್ನ ಕೈಬಿಡುವುದು ಒಳ್ಳೆಯದು’ ಎಂದರು.
Discussion about this post