ಕಾಮಿಡಿ ಕಿಲಾಡಿ ಖ್ಯಾತಿಯ ಯುವ ಕಲಾವಿದ, ಯಲ್ಲಾಪುರ ತಾಲೂಕಿನ ಚಿಮನಳ್ಳಿಯ ಚಂದ್ರಶೇಖರ ಸಿದ್ದಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ತೇಲಂಗಾರ ಸಮೀದ ಚಿಮನಳ್ಳಿಯವರಾದ ಚಂದ್ರಶೇಖರ, ನೀನಾಸಂನಲ್ಲಿ ಅಭಿನಯ ಕಲಿತು ಉತ್ತಮ ಕಲಾವಿದರಾಗಿ ಗುರುತಿಸಿಕೊಂಡಿದ್ದರು.
ಕೆಲ ವರ್ಷಗಳ ಹಿಂದೆ ಝೀ ಕನ್ನಡ ವಾಹಿನಿಯ ಕಾಮಿಡಿ ಕಿಲಾಡಿ ರಿಯಾಲಿಟಿ ಶೋದಲ್ಲಿ ಭಾಗವಹಿಸಿದ್ದರು. ತಮ್ಮ ನಟನೆಯ ಮೂಲಕ ರಾಜ್ಯದ ಗಮನ ಸೆಳೆದಿದ್ದರು. ಅಲ್ಲದೇ ಕೆಲವು ಧಾರಾವಾಹಿಗಳಲ್ಲೂ ಸಣ್ಣಪುಟ್ಟ ಪಾತ್ರಗಳನ್ನು ನಿರ್ವಹಿಸಿದ್ದರು.
ತೇಲಂಗಾರಿನ ಮೈತ್ರಿ ಕಲಾ ಬಳಗದ ಕಾರ್ಯಕಾರಿ ಸಮಿತಿಯ ಸದಸ್ಯರೂ ಆಗಿದ್ದ ಚಂದ್ರಶೇಖರ, ಉತ್ತಮ ಯೋಗಪಟುವೂ ಆಗಿದ್ದರು.
ನಟನೆಯಲ್ಲಿ ಉತ್ತಮ ಭವಿಷ್ಯ ಹೊಂದಿದ್ದ ಯುವ ಕಲಾವಿದ ಆತ್ಮಹತ್ಯೆ ಮಾಡಿಕೊಂಡಿರುವುದು ವಿಷಾದದ ಸಂಗತಿ. ಇತ್ತೀಚಿನ ವರ್ಷಗಳಲ್ಲಿ ವಿವಿಧ ಟಿವಿ ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿ ಬರುತ್ತಿರುವ ಗ್ರಾಮೀಣ ಪ್ರತಿಭೆಗಳ ಬದುಕು ದುರಂತ ಅಂತ್ಯ ಕಾಣುತ್ತಿರುವುದು ವಿಪರ್ಯಾಸವಾಗಿದೆ.