6

ಭ್ರಷ್ಟಾಚಾರದ ತನಿಖೆಗೆ ಬಂದ ಅಧಿಕಾರಿಯೂ ಭ್ರಷ್ಟ?: ಇನ್ನು ಲೋಕಾಯುಕ್ತರೇ ಗತಿ

ಯಲ್ಲಾಪುರ ತಾಲೂಕಿನ ದೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭ್ರಷ್ಟಾಚಾರದ ಕುರಿತು ತನಿಖೆ ಮಾಡಲು ಬಂದ ಅಧಿಕಾರಿಗಳ ವಿರುದ್ಧವೇ ಲೋಕಾಯುಕ್ತಕ್ಕೆ ದೂರು ನೀಡಲು ಸ್ಥಳೀಯರು ಮುಂದಾಗಿದ್ದಾರೆ.

ಈ ಕುರಿತು ಸಾಮಾಜಿಕ ಕಾರ್ಯಕರ್ತರಾದ ನಾಗರಾಜ ಚಾಪೆತೋಡ, ಧೀರಜ್ ತಿನೆಕರ್ ಹಾಗೂ ಗ್ರಾ.ಪಂ ಸದಸ್ಯ ವಿಶ್ವನಾಥ ಹಳೆಮನೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.‌

ದೇಹಳ್ಳಿಯ ಶಾಲಾ ಮೈದಾನ ಸಮತಟ್ಟು ಕಾಮಗಾರಿಗೆ 2021-22 ರಲ್ಲಿ ಸುಮಾರು 4 ಲಕ್ಷ ರೂ ಕ್ರಿಯಾಯೋಜನೆ ಮಾಡಲಾಗಿತ್ತು. ಆದರೆ ಸುಮಾರು 70 ಸಾವಿರ ರೂ ಖರ್ಚಾಗಿದೆ. ಕಾಮಗಾರಿ ನಡೆದು ಪೂರ್ಣ ಬಿಲ್ ಆಗಿದ್ದರೂ, ಕಾಮಗಾರಿ ನಡೆದೇ ಇಲ್ಲ ಎಂದು ಪಿಡಿಒ ಮಾಹಿತಿ ನೀಡಿದ್ದಾರೆ.‌ ಸರಿಯಾದ ಮಾಹಿತಿ ಕೊಡದೇ ಇದ್ದಾಗ ಈ ಬಗ್ಗೆ ಜಿಲ್ಲಾ ಒಂಬುಡ್ಸಮನ್ ಅವರಿಗೆ ದೂರಿದರೂ ಸರಿಯಾಗಿ ತನಿಖೆಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಒಂಬುಡ್ಸಮನ್ ಸಿ.ಟಿ.ನಾಯ್ಕ ಅವರು ತನಿಖೆಗೆ ಬಂದು ತಾ.ಪಂ ಕಚೇರಿಯಲ್ಲಿ ಸಭೆ ಕರೆದಾಗ ಪಿಡಿಒ ನಸ್ರೀನ ಭಾನು ಗೈರಾಗಿದ್ದರು. ಕಾಮಗಾರಿ ವಿಚಾರವಾಗಿ ಕೈಗೊಂಡ ಕ್ರಮದ ಬಗ್ಗೆ ಕೇಳಿದಾಗ ತಾ.ಪಂಗೆ ವರದಿ ನೀಡುವಂತೆ ನೋಟೀಸ್ ನೀಡಿದ್ದಾಗಿ ಹೇಳಿ ಜಾರಿಕೊಂಡರು.‌ ಕಳೆದ ಜುಲೈ 5 ರಂದು ಮತ್ತೊಮ್ಮೆ ವಿಚಾರಣೆಗಾಗಿ ಕರೆದಾಗಲೂ ಪಿಡಿಒ ಹಾಜರಾಗಿಲ್ಲ.

ಜುಲೈ 31 ರಂದು ಸ್ಥಳ ಪರಿಶೀಲನೆಗೆ ಬಂದ ಸಂದರ್ಭದಲ್ಲಿ ನಮ್ಮೊಂದಿಗೆ ಸಾಮಾಜಿಕ ಕಾರ್ಯಕರ್ತರ ಉಪಸ್ಥಿತಿಗೆ, ವಿಡಿಯೊ ಚಿತ್ರೀಕರಣಕ್ಕೆ ಅವಕಾಶ ನಿರಾಕರಿಸಿದ್ದರು. ಆದರೆ ಗ್ರಾ.ಪಂ ಅಧ್ಯಕ್ಷರೊಂದಿಗೆ ಸಾಮಾಜಿಕ ಕಾರ್ಯಕರ್ತರೆಂದು ಹೇಳಿಕೊಂಡು ಅನೇಕರು ಬಂದರೂ ಅಧಿಕಾರಿಗಳು ಅವಕಾಶ ಮಾಡಿಕೊಟ್ಟಿದ್ದರು. ಇದನ್ನು ಪ್ರಶ್ನಿಸಿದಾಗ ಅಧಿಕಾರಿಗಳು ನಮಗೇ ಗರಂ ಆಗಿದ್ದಾರೆಂದು ದೂರಿದರು.

ಗ್ರಾ.ಪಂ ಸದಸ್ಯ ವಿಶ್ವನಾಥ ಹಳೆಮನೆ ಮಾತನಾಡಿ, ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿರುವುದು ಕಂಡು ಬಂದಿದೆ. 25 ಕೂಲಿಗಳ ಹೆಸರು ಹಾಕಿ, ಬೇರೆ 12-13 ಜನರ ಖಾತೆಗಳಿಗೆ ಹಣ ಬಟವಡೆ ಮಾಡಲಾಗಿದೆ. ನಕಲಿ ಸಹಿ ಹಾಕಿರುವ ಅನುಮಾನವಿದೆ. ಕೆಲಸ ಮಾಡಿದ ಕೂಲಿಗಳೇ ಬೇರೆ, ಹಣ ಜಮಾ ಆಗಿರುವುದೇ ಬೇರೆಯವರ ಖಾತೆಗೆ. ಕಾಮಗಾರಿಯ ಮುಗಿದ ನಂತರ ಜಿಪಿಎಸ್ ಇಲ್ಲದ ಚಿತ್ರವನ್ನು ಅಂಟಿಸಿ ಬಿಲ್ ಮಾಡಲಾಗಿದೆ. ಈ ಬಗ್ಗೆ ಕೇಳಿದರೆ ಅಧಿಕಾರಿಗಳಿಂದ ಸರಿಯಾದ ಸ್ಪಂದನೆ ದೊರೆತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಾರ್ವಜನಿಕ ಸೇವಾ ಕೇಂದ್ರದ ಮುಖ್ಯಸ್ಥ ಧೀರಜ ತಿನೆಕರ್ ಮಾತನಾಡಿ, ಈ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿದ್ದು, ಜಿಲ್ಲಾ ಒಂಬುಡ್ಸಮನ್ ಸರಿಯಾದ ತನಿಖೆ ನಡೆಸಿಲ್ಲ. ಪಿಡಿಒ ಸರಿಯಾದ ಮಾಹಿತಿ ನೀಡಿಲ್ಲ. ತನಿಖೆ ನಡೆಸಲು ಬಂದ ಅಧಿಕಾರಿಗಳೇ ಭ್ರಷ್ಟಾಚಾರದಲ್ಲಿ ತೊಡಗಿರುವ ಶಂಕೆಯಿದೆ. ಇವರ ವಿರುದ್ಧ ತನಿಖೆಗೆ ಆಗ್ರಹಿಸಿ ಲೋಕಾಯುಕ್ತರಿಗೆ ದೂರು ನೀಡಲಾಗುವುದೆಂದರು.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page