ಯಲ್ಲಾಪುರದ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದಲ್ಲಿ ವಿ.ಟಿ. ಹೆಗಡೆ ತೊಂಡೆಕೆರೆ ಅವರು ವಿವಿಧ ಹುದ್ದೆಗಳಲ್ಲಿ 35 ವರ್ಷಗಳಿಂದ ಸೇವೆ ಸಲ್ಲಿಸಿ, ಇದೀಗ ಮುಖ್ಯ ಕಾರ್ಯನಿರ್ವಾಹಕರಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದಾರೆ.
ಹೆಗಡೆ ಅವರನ್ನು ಸಂಸ್ಥೆಯ ವತಿಯಿಂದ ಗೌರವಿಸಿ ಬೀಳ್ಕೊಡುವ ಕಾರ್ಯಕ್ರಮ ಸಂಸ್ಥೆಯ ಸಭಾಭವನದಲ್ಲಿ ಆಗಸ್ಟ್ 7 ರಂದು ಬೆಳಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಸಂಸ್ಥೆಯ ಅಧ್ಯಕ್ಷ ಎನ್.ಕೆ.ಭಟ್ಟ ಅಗ್ಗಾಶಿಕುಂಬ್ರಿ, ಶಾಸಕ ಶಿವರಾಮ ಹೆಬ್ಬಾರ, ಸಂಕಲ್ಪ ಸಂಸ್ಥೆ ಅಧ್ಯಕ್ಷ ಪ್ರಮೋದ ಹೆಗಡೆ, ವಿಶ್ವದರ್ಶನ ಶಿಕ್ಷಣ ಸಮೂಹದ ಅಧ್ಯಕ್ಷ ಹರಿಪ್ರಕಾಶ ಕೋಣೆಮನೆ, ಅಡಕೆ ವ್ಯವಹಾರಸ್ಥರ ಸಂಘದ ಅಧ್ಯಕ್ಷ ರವಿ ಹೆಗಡೆ, ಧಾತ್ರಿ ಫೌಂಡೇಷನ್ ಅಧ್ಯಕ್ಷ ಶ್ರೀನಿವಾಸ ಭಟ್ಟ, ಕಳಚೆಯ ಸಹ್ಯಾದ್ರಿ ಸಹಕಾರಿಯ ಅಧ್ಯಕ್ಷ ಉಮೇಶ ಭಾಗ್ವತ, ಟಿಎಂಎಸ್ ಉಪಾಧ್ಯಕ್ಷ ನರಸಿಂಹ ಕೋಣೆಮನೆ ಹಾಗೂ ನಿರ್ದೇಶಕರು ಭಾಗವಹಿಸಲಿದ್ದಾರೆ.
ಬೀಳ್ಕೊಡುಗೆ ಸಮಾರಂಭದಲ್ಲಿ ಕೆಲ ಮಧುರ ಕ್ಷಣಗಳನ್ನು ಎಲ್ಲರೊಂದಿಗೆ ಕಳೆಯುವ ಇಚ್ಛೆಯೊಂದಿಗೆ ರೈತರು, ಸಂಸ್ಥೆಯ ಸದಸ್ಯರು, ಹಿತೈಷಿಗಳನ್ನು ವಿ.ಟಿ.ಹೆಗಡೆ ಪ್ರೀತಿಯಿಂದ ಆಹ್ವಾನಿಸಿದ್ದಾರೆ.