ಯಲ್ಲಾಪುರದ ತಾಲೂಕು ಮಾರ್ಕೆಟಿಂಗ್ ಸೊಸೈಟಿಯಲ್ಲಿ ವಿವಿಧ ಹುದ್ದೆಗಳಲ್ಲಿ 35 ವರ್ಷಗಳಿಂದ ಕಾರ್ಯನಿರ್ವಹಿಸಿ, ಮುಖ್ಯ ಕಾರ್ಯನಿರ್ವಾಹಕರಾಗಿ ನಿವೃತ್ತರಾದ ವಿ.ಟಿ.ಹೆಗಡೆ ತೊಂಡೆಕೆರೆ ಅವರನ್ನು ಸಂಸ್ಥೆಯ ವತಿಯಿಂದ ಗೌರವಿಸಿ, ಬೀಳ್ಕೊಡಲಾಯಿತು.
ನಿವೃತ್ತರಾದ ವಿ.ಟಿ.ಹೆಗಡೆ ಅವರು ಸ್ವರ್ಣವಲ್ಲೀ ಮಠದ ಅಂಗ ಸಂಸ್ಥೆಯಾದ ಕರಡೊಳ್ಳಿಯ ಗೋವರ್ಧನ ಗೋಶಾಲೆಗೆ ನಿಧಿ ಸಮರ್ಪಿಸಿ, ಮಾದರಿಯಾದರು.
ನಂತರ ಮಾತನಾಡಿದ ಅವರು, ನೌಕರರಾದವರು ಜನಸ್ನೇಹಿಯಾಗಿ, ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿದರೆ ಜನರ ಪ್ರೀತಿ, ಗೌರವ ಸಿಗುತ್ತದೆ ಎಂದರು. ಗುಮಾಸ್ತನಾಗಿ ಸೇರಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ, ಮುಖ್ಯಕಾರ್ಯನಿರ್ವಾಹಕನಾಗಿ ನಿವೃತ್ತನಾಗುವವರೆಗೆ ಸಹಕಾರ, ಪ್ರೋತ್ಸಾಹ ನೀಡಿದವರಿಗೆ ಕೃತಜ್ಞತೆ ಸಲ್ಲಿಸಿದರು.
ಸಂಸ್ಥೆಯ ಅಧ್ಯಕ್ಷ ಎನ್.ಕೆ.ಭಟ್ಟ ಅಗ್ಗಾಶಿಕುಂಬ್ರಿ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಉಪಾಧ್ಯಕ್ಷ ನರಸಿಂಹ ಕೋಣೆಮನೆ, ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹರಿಪ್ರಕಾಶ ಕೋಣೆಮನೆ, ಅಡಕೆ ವ್ಯವಹಾರಸ್ಥರ ಸಂಘದ ಅಧ್ಯಕ್ಷ ರವಿ ಹೆಗಡೆ, ಧಾತ್ರಿ ಫೌಂಡೇಷನ್ ಅಧ್ಯಕ್ಷ ಶ್ರೀನಿವಾಸ ಭಟ್ಟ, ಕಳಚೆಯ ಸಹ್ಯಾದ್ರಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಉಮೇಶ ಭಾಗ್ವತ, ಪ್ರಭಾರಿ ಮುಖ್ಯ ಕಾರ್ಯನಿರ್ವಾಹಕ ಸುದೀಪ ಹೆಗಡೆ, ವಿದುಷಿ ಸುಮಾ ಹೆಗಡೆ ತೊಂಡೆಕೆರೆ ಇತರರಿದ್ದರು.
ನಿರ್ದೇಶಕರಾದ ವೆಂಕಟರಮಣ ಬೆಳ್ಳಿ ಸ್ವಾಗತಿಸಿದರು. ವೆಂಕಟರಮಣ ಭಟ್ಟ ಕಿರಕುಂಭತ್ತಿ ನಿರ್ವಹಿಸಿದರು.