ಕಳೆದ 8 ವರ್ಷಗಳಿಂದ ಯಲ್ಲಾಪುರದ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸಿ, ಪದೋನ್ನತಿ ಹೊಂದಿ ವರ್ಗಾವಣೆಗೊಂಡ ಎನ್.ಆರ್.ಹೆಗಡೆ ಅವರನ್ನು ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಇಲಾಖೆಯ ವತಿಯಿಂದ ಗೌರವಿಸಿ ಬೀಳ್ಕೊಡಲಾಯಿತು.
ಕುಮಟಾದ ಡಯಟ್ ನ ಉಪನಿರ್ದೇಶಕರಾಗಿ ಬಡ್ತಿ ಹೊಂದಿದ ಎನ್.ಆರ್.ಹೆಗಡೆ ಅವರನ್ನು ಶಿಕ್ಷಕರು, ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಗೌರವಿಸಿ ಬೀಳ್ಕೊಟ್ಟರು.
ಇದೇ ವೇಳೆ ತಾಲೂಕಿನ ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ರೇಖಾ ನಾಯ್ಕ ಅವರು ಅಧಿಕಾರ ವಹಿಸಿಕೊಂಡರು. ಅವರನ್ನು ಗೌರವಿಸಿ ಸ್ವಾಗತಿಸಲಾಯಿತು.
ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂಜೀವಕುಮಾರ ಹೊಸ್ಕೇರಿ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆರ್.ಆರ್.ಭಟ್ಟ, ದೈಹಿಕ ಶಿಕ್ಷಣ ಪರಿವೀಕ್ಷಕ ಪ್ರಕಾಶ ತಾರೀಕೊಪ್ಪ ಇತರರಿದ್ದರು.