ಯಲ್ಲಾಪುರ ತಾಲೂಕಿನ ಹಿಟ್ಟಿನಬೈಲ್ ಕ್ರಾಸ್ ಬಳಿ ಬಸ್ ಹಾಗೂ ಲಾರಿ ನಡುವೆ ಅಪಘಾತವಾದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್.ಎಂ.ಎನ್ ಭೇಟಿ ನೀಡಿದರು.
ಘಟನಾ ಸ್ಥಳ ಪರಿಶೀಲಿಸಿದ ಅವರು, ಅಪಘಾತದ ಕುರಿತು ಅಧಿಕಾರಿಗಳಿಂದ ವಿವರ ಪಡೆದರು. ಯಲ್ಲಾಪುರ ಸಿಪಿಐ ರಮೇಶ ಹಾನಾಪುರ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಧರ್ಮಸ್ಥಳಕ್ಕೆ ಹೊರಟಿದ್ದ ಬಸ್ ಹಾಗೂ ನಿಂತಿದ್ದ ಲಾರಿ ನಡುವಿನ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದರು. 7 ಜನರು ಗಾಯಗೊಂಡಿದ್ದರು.