ನಡೆದು ಹೋಗುತ್ತಿದ್ದ ಮಹಿಳೆಗೆ ಬಸ್ ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಸಾವಿಗೀಡಾದ ಘಟನೆ ಹಳಿಯಾಳ ತಾಲೂಕಿನ ಕರ್ಲಕಟ್ಟಾ ಬಳಿ ನಡೆದಿದೆ.
ಹಳಿಯಾಳ ತಾಲೂಕಿನ ಸಾಂಬ್ರಾಣಿಯ ರೂಪಾ ಸಹದೇವ ಮೋರೆ (35) ಮೃತ ಮಹಿಳೆ. ಈಕೆ ಕುರಿಗದ್ದಾ ಬದಿಯಿಂದ ಸಾಂಬ್ರಾಣಿ ಕಡೆಗೆ ನಡೆದು ಬರುತ್ತಿದ್ದಾಗ, ಯಲ್ಲಾಪುರ ಕಡೆಯಿಂದ ಹಳಿಯಾಳ ಕಡೆಗೆ ಹೋಗುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ.
ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಯಲ್ಲಾಪುರ ಘಟಕದ ಬಸ್ ಚಾಲಕ ಮಂಜುನಾಥ ಮರಾಠಿ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.