6
  • Latest

ಸೀಬರ್ಡ ಸಂತ್ರಸ್ತರ ಗೋಳಿಗೆ ಇಲ್ಲವೇ ಪರಿಹಾರ: ಉಸ್ತುವಾರಿ ಪ್ರಶ್ನೆಗೆ ನೌಕಾನೆಲೆ ಅಧಿಕಾರಿಗಳ ನಿರುತ್ತರ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಸೀಬರ್ಡ ಸಂತ್ರಸ್ತರ ಗೋಳಿಗೆ ಇಲ್ಲವೇ ಪರಿಹಾರ: ಉಸ್ತುವಾರಿ ಪ್ರಶ್ನೆಗೆ ನೌಕಾನೆಲೆ ಅಧಿಕಾರಿಗಳ ನಿರುತ್ತರ

ಕೃಷಿಗೂ ಅವಕಾಶವಿಲ್ಲ, ಪರಿಹಾರವೂ ಬಂದಿಲ್ಲ.

AchyutKumar by AchyutKumar
June 27, 2024
in ದೇಶ - ವಿದೇಶ
advt advt advt
ADVERTISEMENT
Advertisement. Scroll to continue reading.

ಕಾರವಾರ: ಸೀ ಬರ್ಡ್ ನೌಕಾನೆಲೆ ಉದ್ದೇಶಕ್ಕಾಗಿ ನೆಲ್ಲೂರು ಕಂಚಿನಬೈಲುವಿನಲ್ಲಿ ಭೂ ಸ್ವಾಧೀನ ಪಡಿಸಿಕೊಂಡಿರುವ 58.11 ಎಕರೆಗೆ ಸಂಬoಧಿಸಿದoತೆ ಸಂತ್ರಸ್ತರಿಗೆ ಇದುವರೆಗೆ ಪರಿಹಾರ ನೀಡದ ಬಗ್ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಅಸಮಧಾನ ವ್ಯಕ್ತಪಡಿಸಿದರು. ಈ ಎಲ್ಲಾ ಸಂತ್ರಸ್ತರಿಗೆ ಶೀಘ್ರದಲ್ಲಿ ಪರಿಹಾರ ದೊರಕಿಸಲು ತಾವೇ ದೆಹಲಿಯ ರಕ್ಷಣಾ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ಅವರು ತಿಳಿಸಿದರು.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಸೀಬರ್ಡ್ ಯೋಜನೆಯ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು `ಎನ್.ಕೆ.ಬೈಲು ನಲ್ಲಿ ಸೀ ಬರ್ಡ್ ನೌಕಾನೆಲೆ ಉದ್ದೇಶಕ್ಕಾಗಿ ಸ್ವಾಧೀನಪಡಿಸಿಕೊಂಡಿರುವ 58.11 ಎಕರೆಗೆೆ ಸಂಬAಧಿಸಿದoತೆ, ಈ ಭೂಮಿಯ ಸಂತ್ರಸ್ತರಿಗೆ ಇದುವರೆಗೂ ಪರಿಹರ ದೊರೆತಿಲ್ಲ. ಈ ಭೂಮಿಯಲ್ಲಿ ಯಾವುದೇ ಕೃಷಿ ಚಟುವಟಿಕೆ ಮಾಡಲು ಸಹ ಅನುಮತಿ ನೀಡುತ್ತಿಲ್ಲ. ಈ ಭೂಮಿಗೆ ಈಗಾಗಲೇ 18 ಕೋಟಿ 91 ಲಕ್ಷ ರೂ ಪರಿಹಾರದ ಮೊತ್ತವನ್ನು ಬಿಡುಗಡೆಗೊಳಿಸುವಂತೆ ಬೆಂಗಳೂರಿನ ಡಿಫೆನ್ಸ್ ಎಸ್ಟೆಟ್ ಅಧಿಕಾರಿಗಳೊಂದಿಗೆ ಹಲವು ಪತ್ರ ಬರೆದರೂ ಸಹ ಯಾವುದೇ ಪ್ರಗತಿಯಾಗಿಲ್ಲ’ ಎಂದು ವಿವರಿಸಿದರು.
ಈ ವಿಷಯದ ಕುರಿತಂತೆ ಬೆಂಗಳೂರಿನಲ್ಲಿರುವ ಡಿಫೆನ್ಸ್ ಎಸ್ಟೆಟ್ ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಈ ಕುರಿತಂತೆ ಪ್ರಸ್ಥಾವನೆಯು ದೆಹಲಿಯ ರಕ್ಷಣಾ ಸಚಿವಾಲದಯಲ್ಲಿ ಬಾಕಿ ಇರುವ ಬಗ್ಗೆ ತಿಳಿದು ಅವರು ರಕ್ಷಣಾ ಇಲಾಖೆಯೊಂದಿಗೆ ನಡೆಸಿರುವ ಪತ್ರ ವ್ಯವಹಾರಗಳನ್ನು ಪ್ರತಿಯನ್ನು ತಮಗೆ ನೀಡುವಂತೆ ಹಾಗೂ ಈ ಪ್ರಕರಣದ ಬಗ್ಗೆ ತಾವೇ ಖುದ್ದು ರಕ್ಷಣಾ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಶೀಘ್ರದಲ್ಲಿ ಪರಿಹಾರ ದೊರಕಿಸಲು ಪ್ರಯತ್ನಿಸುವುದಾಗಿ ಹೇಳಿದರು.
ನೌಕಾನೆಲೆಯ ಕಾರಣದಿಂದ ಭೂಮಿ ಕಳೆದುಕೊಂಡಿರುವ 158 ಕುಟುಂಬಗಳಲ್ಲಿ ವಿವಿಧ ಕಾರಣಗಳಿಂದ ಇದುವರೆಗೆ ಪರಿಹಾರ ದೊರೆಯದ ಕುಟುಂಬಗಳಿಗೆ ಸಂಬAದಿಸಿದoತೆ 1 ತಿಂಗಳ ಒಳಗೆ ಎಲ್ಲಾ ಅಗತ್ಯ ಪ್ರಕ್ರಿಯೆಗಳನ್ನು ಮುಕ್ತಾಯಗೊಳಿಸಿ, ಪರಿಹರ ದೊರೆಯಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು. ಮುದಗಾದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ನಿರ್ಮಿಸಿರುವ ಅಣೆಕಟ್ಟುನಿಂದಾಗಿ ಮಳೆಗಾಲದಲ್ಲಿ ನೌಕಾನೆಲೆಯೊಳಗೆ ನೀರು ನುಗ್ಗುತ್ತಿರುವ ಬಗ್ಗೆ ರಕ್ಷಣಾ ಇಲಾಖೆಯಿಂದ ಬರುತ್ತಿರುವ ದೂರುಗಳ ಬಗ್ಗೆ ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಕೋಸ್ಟ್ಗಾರ್ಡ್ ವತಿಯಿಂದ ನಡೆಯುತ್ತಿರುವ ಕಾಮಗಾರಿಗಳಿಗೆ ವಾಹನಗಳ ಸಂಚಾರಕ್ಕೆ ರಸ್ತೆ ಸಂಪರ್ಕದ ಸಮಸ್ಯೆಯಿರುವ ಬಗ್ಗೆ ನಡೆದ ಚರ್ಚೆಗೆ ಸಂಬAಧಿಸಿದAತೆ ಜಿಲ್ಲಾಡಳಿದೊಂದಿಗೆ ಚರ್ಚಿಸಿ ಪರ್ಯಾಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.
ರಾಷ್ಟಿçÃಯ ಹೆದ್ದಾರಿ ಕಾಮಗಾರಿಗೆ ಸಂಬAಧಿಸಿದoತೆ ಬ್ಲಾಕ್ ಸ್ಟಾಟ್‌ಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಅಪಘಾತಗಳನ್ನು ನಿಯಂತ್ರಿಸುವoತೆ ಮತ್ತು ಹೆದ್ದಾರಿಯಲ್ಲಿ ಬೀದಿ ದೀಪಗಳನ್ನು ಅಳವಡಿಸುವಂತೆ ಐ.ಆರ್.ಬಿ ಇಂಜಿನಿಯರ್‌ಗಳಿಗೆ ಸೂಚಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ್ ಕಾಂದೂ, ಉಪ ವಿಭಾಗಾಧಿಕಾರಿಗಳಾದ ಕನಿಷ್ಠ. ಕಲ್ಯಾಣಿ ಕಾಂಬ್ಳೆ, ನೌಕಾದಳ ಮತ್ತು ಕೋಸ್ಟ್ ಗಾರ್ಡ್ನ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

ADVERTISEMENT
ADVERTISEMENT
Advertisement. Scroll to continue reading.
ShareSendTweetShare
ADVERTISEMENT
Previous Post

ಬಿಸಗೋಡು ಕಟ್ಟಡಗಳ ತೆರವಿಗೆ ಆದೇಶ: ಶೈಕ್ಷಣಿಕ-ಧಾರ್ಮಿಕ ಕೇಂದ್ರದ ಮೇಲೆ ಕರಿನೆರಳು

Next Post

ಅಪಘಾತದಲ್ಲಿ ಗಾಯಗೊಂಡಿದ್ದ ರೈತ ಸಾವು: ವೃದ್ಧ ತಂದೆಯ ಕಣ್ಣೀರು

Next Post

ಅಪಘಾತದಲ್ಲಿ ಗಾಯಗೊಂಡಿದ್ದ ರೈತ ಸಾವು: ವೃದ್ಧ ತಂದೆಯ ಕಣ್ಣೀರು

ಈ ಬಾರಿ ಹೊಸ ಸರ್ಕಾರಿ ಕಟ್ಟಡ ನಿರ್ಮಾಣ ಇಲ್ಲ!

ಅಂದು ಊಟಕ್ಕೂ ಗತಿ ಇಲ್ಲದವರು ಇದೀಗ ಸ್ವ ಉದ್ದಿಮೆದಾರರು!

ಅಂದು ಊಟಕ್ಕೂ ಗತಿ ಇಲ್ಲದವರು ಇದೀಗ ಸ್ವ ಉದ್ದಿಮೆದಾರರು!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.