ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಆಗಸ್ಟ್ 19 ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೊಯಿಡಾ ಹಾಗೂ ದಾಂಡೇಲಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಳಿಯಾಳ ಮತ್ತು ಮುಂಡಗೋಡ ತಾಲೂಕುಗಳು ಮಾತ್ರ ರಜೆಯಿಂದ ಹೊರತಾಗಿವೆ.
ಹವಾಮಾನ ಇಲಾಖೆಯ ಮುನ್ಸೂಚನೆಯ ಆಧಾರದ ಮೇಲೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.