ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 20 ರಂದು ಜಿಲ್ಲೆಯ ಘಟ್ಟದ ಮೇಲಿನ ಆರು ತಾಲೂಕುಗಳ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಯಲ್ಲಾಪುರ, ಶಿರಸಿ, ಸಿದ್ದಾಪುರ, ಮುಂಡಗೋಡ, ಜೊಯಿಡಾ ಹಾಗೂ ದಾಂಡೇಲಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಮಳೆಯ ಹಿನ್ನೆಲೆಯಲ್ಲಿ ಸತತ ಮೂರನೇ ದಿನ ರಜೆ ನೀಡಲಾಗಿದೆ. 20 ರಂದೂ ಭಾರಿ ಮಳೆಯ ಮುನ್ಸೂಚನೆ ಇದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.