ರಾಜ್ಯ ಸರ್ಕಾರದಲ್ಲಿ ನಡೆದ ಭ್ರಷ್ಟಾಚಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿಗರನ್ನು ಜೂ 28ರಂದು ಪೊಲೀಸರು ಬಂಧಿಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ 187 ಕೋಟಿ ಅವ್ಯವಹಾರ ಖಂಡಿಸಿ ಪ್ರತಿಭಟನೆ ನಡೆಯುತ್ತಿತ್ತು. ಸರ್ಕಾರದ ವಿರುದ್ಧ ಘೋಷಣೆ ಮೊಳಗುತ್ತಿದ್ದಂತೆ ಭದ್ರತೆಗೆ ಆಗಮಿಸಿದ ಪೊಲೀಸರು ಬಿಜೆಪಿ ಜಿಲ್ಲಾಧ್ಯಕ್ಷ ಎನ್ ಎಸ್ ಹೆಗಡೆ ಅವರನ್ನು ವಶಕ್ಕೆ ಪಡೆದರು.
`ವಾಲ್ಮಿಕಿ ಅಭಿವೃದ್ಧಿ ನಿಗಮದ ಅಧಿಕಾರಿ ಲೆಕ್ಕಾಧಿಕಾರಿ ಚಂದ್ರಶೇಖರ ಆತ್ಮಹತ್ಯೆಯ ತನಿಖೆ ಹಳ್ಳ ಹಿಡಿದಿದೆ. ಎಸ್ ಐ ಟಿ ತಂಡದಿoದ ಅವರ ಕುಟುಂಬಕ್ಕೆ ನ್ಯಾಯ ಒದಗಿಸಲು ಅಸಾಧ್ಯ’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. `ತನಿಖೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಸ್ತಕ್ಷೇಪ ಮಾಡುತ್ತಿದ್ದಾರೆ. ಅವರು ತಮ್ಮ ಹುದ್ದೆ ತ್ಯಜಿಸಬೇಕು’ ಎಂದು ಒತ್ತಾಯಿಸಿದರು.
Discussion about this post