6

ಸರಣಿ ಅಪಘಾತ: 7 ಜನರಿಗೆ ಗಾಯ

ಕೆ.ಎಸ್.ಆರ್.ಟಿ.ಸಿ ಬಸ್, ಟ್ಯಾಂಕರ್ ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿ, 7 ಜನರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ಪಟ್ಟಣದ ಜೋಡುಕೆರೆ ಬಳಿಯ ಪೆಟ್ರೊಲ್ ಪಂಪ್ ಎದುರು ನಡೆದಿದೆ.

ಹುಬ್ಬಳ್ಳಿ ಕಡೆಯಿಂದ ಯಲ್ಲಾಪುರ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್.ಟಿ ಬಸ್ ಹಾಗೂ ಟ್ಯಾಂಕರ್ ನಡುವೆ ಅಪಘಾತ ಉಂಟಾಗಿದೆ. ನಂತರ ಸಮೀಪದಲ್ಲಿದ್ದ ಕಾರಿಗೆ ಡಿಕ್ಕಿಯಾಗಿದೆ. ಇದರಿಂದ ಮೂರೂ ವಾಹನಗಳು ಅಲ್ಪಸ್ವಲ್ಪ ಜಖಂಗೊಂಡಿದೆ.

ಬಸ್ ನಲ್ಲಿದ್ದ 7 ಜನ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಅಪಘಾತಗೊಂಡ ವಾಹನಗಳನ್ನು ತೆರವುಗೊಳಿಸಿ, ಸಂಚಾರ ವ್ಯವಸ್ಥೆ ಸುಗಮಗೊಳಿಸಿದರು.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page