6

ಸಿದ್ದಾಪುರ ಇಲ್ಲೇ ಇರಲಿ, ಯಲ್ಲಾಪುರ ಜಿಲ್ಲಾ ಕೇಂದ್ರವಾಗಲಿ: ನಾಗರಿಕ ವೇದಿಕೆ ಆಗ್ರಹ

ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ಭಾಗವನ್ನು ಜಿಲ್ಲೆಯಿಂದ ಪ್ರತ್ಯೇಕಿಸಿ, ಸಾಗರಕ್ಕೆ ಸೇರಿಸುವ ಪ್ರಸ್ತಾಪವನ್ನು ಯಲ್ಲಾಪುರದ ನಾಗರಿಕ ವೇದಿಕೆ ಖಂಡಿಸಿದೆ.

ಈ ಕುರಿತು ಸೋಮವಾರ ನಡೆದ ನಾಗರಿಕ ವೇದಿಕೆಯ ಅಧ್ಯಕ್ಷ ರಾಮು ನಾಯ್ಕ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಖಂಡನಾ ನಿರ್ಣಯ ಕೈಗೊಳ್ಳಲಾಯಿತು.
ಸಭೆಯಲ್ಲಿ ಮಾತನಾಡಿದ ರಾಮು ನಾಯ್ಕ, ಒಂದು ವೇಳೆ ಘಟ್ಟದ ಮೇಲಿನ ತಾಲೂಕುಗಳ ಪ್ರತ್ಯೇಕ ಜಿಲ್ಲೆ ಆಗುವುದಾದಲ್ಲಿ ಭೌಗೋಳಿಕವಾಗಿ ವಿಸ್ತಾರವಾದ ಯಲ್ಲಾಪುರವನ್ನು ಜಿಲ್ಲಾ ಕೇಂದ್ರವಾಗಿ ಮಾಡಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯ ಗಡಿ ಪ್ರದೇಶದ ತಾಲೂಕುಗಳ ಅಭಿವೃದ್ಧಿಗೆ ಸರ್ಕಾರ ಲಕ್ಷ್ಯ ವಹಿಸಬೇಕು. ಪಕ್ಕದ ಜಿಲ್ಲೆಯ ಗಡಿಗಳಿಗೆ ಹೊಂದಿರುವ ತಾಲೂಕುಗಳು ಆ ಜಿಲ್ಲೆಗೆ ಸೇರುತ್ತ ಹೋದರೆ, ಉತ್ತರ ಕನ್ನಡದ ಅಸ್ತಿತ್ವವೇ ಇರುವುದಿಲ್ಲ. ಈ ವಿಷಯವಾಗಿ ಮುಂದಿನ ದಿನಗಳಲ್ಲಿ ಸರ್ಕಾರಕ್ಕೆ, ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಲು ತೀರ್ಮಾನಿಸಲಾಯಿತು. ಮುಂದಿನ ದಿನಗಳಲ್ಲಿ ಜಿಲ್ಲೆಯ ಹೋರಾಟದ ಬಗ್ಗೆ ಪ್ರತ್ಯೇಕ ಸಮಿತಿ ರಚಿಸಲು ನಿರ್ಧರಿಸಲಾಯಿತು.

ನಾಗರಿಕೆ ವೇದಿಕೆಯ ಪ್ರಮುಖರಾದ ಬೀರಣ್ಣ ನಾಯಕ ಮೊಗಟಾ, ವೇಣುಗೋಪಾಲ ಮದ್ಗುಣಿ, ಡಿ ಜಿ ಹೆಗಡೆ, ನಾಗೇಶ ಯಲ್ಲಾಪುರಕರ್, ಗಜಾನನ ನಾಯ್ಕ ತಳ್ಳಿಕೇರಿ, ತುಳಸಿದಾಸ ನಾಯ್ಕ, ಜಗನ್ನಾಥ ರೇವಣಕರ, ಅನು ಕಾಮತ್, ದಾಸಿಂತ ಫರ್ನಾಂಡೀಸ್, ಮಾದೇವಚಂದ್ರ ಪಂಡರಾಪುರ, ಮುಂತಾದವರು ಭಾಗವಹಿಸಿದ್ದರು.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page