6

ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಟ್ಯಾಂಕರ್ ಟಯರ್ ಗೆ ಬೆಂಕಿ

ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ಡೀಸೆಲ್ ಟ್ಯಾಂಕರ್ ನ ಟಯರ್ ಗೆ ಆಕಸ್ಮಿಕ ಬೆಂಕಿ ತಗುಲಿದೆ.

ಡೀಸೆಲ್ ಟ್ಯಾಂಕರ್ ಚಲಿಸುತ್ತಿದ್ದಾಗಲೇ ಏಕಾಏಕಿ ಹಿಂದಿನ ಟಯರ್ ಗೆ ಬೆಂಕಿ ಹೊತ್ತಿಕೊಂಡಿದೆ. ಜೋರಾಗಿ ಉರಿಯುತ್ತಿದ್ದಂತೆ ಚಾಲಕನ ಲಾರಿಯನ್ನು ನಿಲ್ಲಿಸಿದ್ದಾನೆ.
ವಿಷಯ ತಿಳಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿದ್ದಾರೆ. ಅಗ್ನಿಶಾಮಕ ದಳದವರು ಬೆಂಕಿ ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಚಾಲಕ-ನಿರ್ವಾಹಕರು ಅಪಾಯದಿಂದ ಪಾರಾಗಿದ್ದಾರೆ. ಅಗ್ನಿಶಾಮಕ ದಳದವರು ಸಮಯಕ್ಕೆ ಸರಿಯಾಗಿ ಬಂದು ಬೆಂಕಿ ಆರಿಸಿದ ಕಾರಣಕ್ಕಾಗಿ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದಂತಾಗಿದೆ.

https://youtube.com/shorts/mQ3tdeYi3y8?si=GgVxTz0t0jA48o84
ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂದೂವರೆ ತಾಸು ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗಿತ್ತು. ಪೊಲೀಸರು ಸ್ಥಳದಲ್ಲಿ ಇದ್ದು ಸಂಚಾರ ವ್ಯವಸ್ಥೆ ಸುಗಮಗೊಳಿಸಿದರು.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page