6

ಹೆದ್ದಾರಿಯಲ್ಲಿ ಬೆಂಕಿಗಾಹುತಿಯಾದ ಕಾರು

ಕಾರೊಂದು ಆಕಸ್ಮಿಕವಾಗಿ ಬೆಂಕಿಗಾಹುತಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಯಲ್ಲಾಪುರ ತಾಲೂಕಿನ ಆರತಿಬೈಲ್ ಘಟ್ಟದಲ್ಲಿ ನಡೆದಿದೆ.

ಯಲ್ಲಾಪುರದಿಂದ ಅಂಕೋಲಾ ಕಡೆಗೆ ಹೊರಟಿದ್ದ ದೆಹಲಿ ಪಾಸಿಂಗ್ ಕಾರಿನ ರೇಡಿಯೇಟರ್ ಹೀಟ್ ಆಗಿ ಬೆಂಕಿ ಹೊತ್ತಿಕೊಂಡಿದೆ. ಕ್ಷಣ ಮಾತ್ರದಲ್ಲಿ ಬೆಂಕಿ‌ ವ್ಯಾಪಿಸಿ, ಕಾರು ಜೋರಾಗಿ ಉರಿಯತೊಡಗಿತು.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರು ಬೆಂಕಿ ಆರಿಸಿದರು. ಆದರೆ ಅಷ್ಟರಲ್ಲಾಗಲೇ ಕಾರು ಸಂಪೂರ್ಣ ಸುಟ್ಟು ಹೋಗಿತ್ತು. ಕಾರಿನಲ್ಲಿದ್ದವರಿಗೆ ಯಾವುದೇ ಅಪಾಯ ಉಂಟಾಗಿಲ್ಲ.

ಘಟನೆಯಿಂದಾಗಿ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಯಿತು. ಪೊಲೀಸರು ಸ್ಥಳಕ್ಕಾಗಮಿಸಿ, ವಾಹನಗಳ ಸಂಚಾರ ಸುಗಮಗೊಳಿಸಿದರು.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page