ಯಲ್ಲಾಪುರ: ಇಡಗುಂದಿಯ ವಿಶ್ವದರ್ಶನ ಪ್ರೌಢಶಾಲೆಯಲ್ಲಿ `ಚಿಣ್ಣರ ಚುನಾವಣೆ’ ನಡೆದಿದ್ದು, ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಚುನಾವಣಾ ಪ್ರಕ್ರಿಯೆಗಳ ಕುರಿತು ಮಾಹಿತಿ ನೀಡುವ ಪ್ರಯತ್ನ ನಡೆಯಿತು.
ಮೊದಲು ಚುನಾವಣಾ ಅಧೀಸೂಚನೆ ಹೊರಡಿಸಿ, ನಂತರ ನಾಮಪತ್ರ ಸಲ್ಲಿಸಲು ಸಮಯಾವಕಾಶ ನೀಡಲಾಯಿತು. ನಾಮಪತ್ರ ಹಿಂಪಡೆಯುವಿಕೆ, ಪರಿಶೀಲನೆ, ಪ್ರಚಾರಕ್ಕೆ ಅವಕಾಶ ಕಲ್ಪಿಸಲಾಯಿತು. ಮುಖ್ಯಾಧ್ಯಾಪಕ ಪ್ರಸನ್ನ ಹೆಗಡೆ ಚುನಾವಣಾಧಿಕಾರಿಯಾಗಿದ್ದರು. ವಿದ್ಯಾರ್ಥಿಗಳು ಉತ್ಸಾಹದಿಂದ ಮತದಾನ ಮಾಡಿದರು. ಮತ ಎಣಿಕೆ ನಂತರ ಮುಖ್ಯಮಂತ್ರಿ ಹಾಗೂ ವಿವಿಧ ಸಚಿವರನ್ನು ಆಯ್ಕೆ ನಡೆದು, ಅವರು ಪ್ರಮಾಣ ವಚನ ಸ್ವೀಕರಿಸಿದರು.
`ಮತದಾನ ಮಾಡುವುದು ಪ್ರತಿಯೊಬ್ಬರ ಹೊಣೆ’ ಎಂದು ಸಮಾಜ ವಿಜ್ಞಾನ ಶಿಕ್ಷಕ ರಾಘವೇಂದ್ರ ಹೆಗಡೆ ಕರೆ ನೀಡಿದರು.




Discussion about this post